ಮಂಗಳೂರಿನಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾ ಕ್ಷೇತ್ರದಲ್ಲಿನ ಪ್ರಸಕ್ತ ಪರಿಸ್ಥಿತಿಯ ಬಗ್ಗೆ ಅತೃಪ್ತಿಯನ್ನು ವ್ಯಕ್ತಪಡಿಸಿದರು. ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪರಸ್ಪರ ಗೌರವ, ಆದರಗಳಿಂದ ನಡೆದರೆ ಮಾತ್ರ ಉತ್ತಮ ಸಮಾಜ ಸೃಷ್ಟಿಯಾಗಬಲ್ಲದು, ಈ ನಿಟ್ಟಿನಲ್ಲಿ ಚಿಂತನೆ ಅಗತ್ಯವಾಗಿದೆ ಎಂದು ಅಭಿಪ್ರಾಯ ಪಟ್ಟ ಅವರು, 580 ಪ್ರಾಥಮಿಕ ಶಾಲೆ, 300 ಪ್ರೌಢಶಾಲೆಗಳಿಗೆ 20,000ಕ್ಕೂ ಮೀರಿ ಶಿಕ್ಷಕರ ನೇಮಕಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದರು.ಯಾವುದೇ ಮಗುವು ವಿದ್ಯೆಯಿಂದ ವಂಚಿತವಾಗದಿರಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಶಿಕ್ಷಕರ ವೇತನದಲ್ಲೂ ಲೋಪವಾಗದಂತೆ ಕ್ರಮ ಕೈಗೊಳ್ಳಲಾಗಿದೆ; ಇದಕ್ಕೆ ಪೂರಕವಾಗಿ ಶಿಕ್ಷಕ ವರ್ಗ ಮತ್ತು ವಿದ್ಯಾರ್ಥಿಗಳು ಸ್ಪಂದಿಸಬೇಕು ಕರೆ ನೀಡಿದರು. ಸಮಾರಂಭದಲ್ಲಿ 12 ಮ0ದಿ ಶಿಕ್ಷಕರಿಗೆ ಜಿಲ್ಲಾ ಪ್ರಶಸ್ತಿ ಮತ್ತು 5 ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.