Monday, October 12, 2009

ಅಪರಾಧ ಮುಕ್ತ ಸಮಾಜ ನಿರ್ಮಾಣ ಮಾಡಲು ಪೋಲಿಸರಿಗೆ ಸಕಲ ನೆರವು : ಸಚಿವ ಪಾಲೇಮಾರ್

ಮಂಗಳೂರು, ಸೆಪ್ಟೆಂಬರ್ 12: ರಾಜ್ಯದ ಜನತೆ ಶಾಂತಿ ಮತ್ತು ನೆಮ್ಮದಿಯಿಂದ ಬದುಕಬೇಕು. ಇದರಲ್ಲಿ ಪೋಲಿಸರ ಪಾತ್ರ ಮಹತ್ವದ್ದು,ಅಪರಾಧ ಮತ್ತು ಶೋಷಣೆ ಮುಕ್ತ ಸಮಾಜ ನಿರ್ಮಾಣ ಮಾಡಲು ಪೋಲಿಸ್ ಇಲಾಖೆಗೆ ಬೇಕಾದ ಸಕಲ ನೆರವು ನೀಡಲು ಸರ್ಕಾರ ಬದ್ದವಾಗಿದೆ ಎ0ದು ರಾಜ್ಯ ಬಂದರು,ಪರಿಸರ ಮತ್ತು ಜಿಲ್ಲಾ ಉಸ್ತುವರಿ ಸಚಿವರಾದ ಕ್ರಷ್ಣ ಜೆ. ಪಾಲೇಮಾರ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದ 12 ನೇ ತಂಡದ ಸಶಸ್ತ್ರ ಪೋಲಿಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಸಮಾರಂಭದಲ್ಲಿ ಪಥ ಸಂಚಲನವನ್ನು ಪರಿವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.ಅಧಿಕಾರಿಗಳಲ್ಲಿನ ದಕ್ಚತೆಯಿಂದ ಇತ್ತಿಚಿನ ದಿನಗಳಲ್ಲಿ ಪೋಲಿಸ್ ಇಲಾಖೆ ಅತ್ಯುತ್ತಮ ಕೆಲಸವನ್ನು ಮಾಡುತ್ತಿದೆ.ಇದರಿಂದ ರಾಜ್ಯದಲ್ಲಿ ಅಪರಾಧಗಳು ಗಣನೀಯವಾಗಿ ಕಡಿಮೆಯಾಗಿವೆ ಎಂದು ಶ್ಲಾಘಿಸಿದ ಅವರು ಪೋಲಿಸ್ ಠಾಣೆಗಳಿಗೆ ಬರುವ ಜನ ಸಾಮಾನ್ಯನನ್ನು ಗೌರವದಿಂದ ಕಂಡು ಅವನೊಂದಿಗೆ ಸೌಜನ್ಯದಿಂದ ವರ್ತಿಸಿ, ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕೆಂದು ಅವರು ಇದೇ ಸಂದರ್ಭದಲ್ಲಿ ಕರೆ ನೀಡಿದರು. ರಾಜ್ಯ ಹೆಚ್ಚುವರಿ ಪೋಲಿಸ್ ಮಹಾ ನಿರ್ದೇಶಕ (ನೇಮಕಾತಿ ಮತ್ತು ತರಬೇತಿ) ಎಸ್. ಟಿ. ರಮೇಶ್, ತರಬೇತಿ ಐಜಿಪಿ ಡಾ. ಎಸ್. ಪರಶಿವಮೂರ್ತಿ, ಪಶ್ಚಿಮ ವಲಯ ಐಜಿಪಿ ಗೋಪಾಲ್ ಬಿ. ಹೊಸೂರು, ಜಿಲ್ಲಾ ಎಸ್ಪಿ ಡಾ. ಸುಬ್ರಹ್ಮಣ್ಯೇಶ್ವರ ರಾವ್, ಪ್ರಾಂಶುಪಾಲ ಮತ್ತು ಎಡಿಶನಲ್ ಎಸ್ಪಿ ಆರ್. ರಮೇಶ್ ಮತ್ತಿತರ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.