Tuesday, November 17, 2009

ದ.ಕ.ಹಾಲು ಒಕ್ಕೂಟಕ್ಕೆ 50 ಕೋಟಿ ರೂ.:ಸೋಮಶೇಖರ ರೆಡ್ಡಿ

ಮಂಗಳೂರು,ನ.17:ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಇತರ ಒಕ್ಕೂಟಗಳಿಗೆ ಮಾದರಿಯಾಗಿ ಕರ್ತವ್ಯನಿರ್ವಹಿಸುತ್ತಿದ್ದು ಒಕ್ಕೂಟದ ಅಭಿವೃದ್ಧಿಗೆ 50 ಕೋಟಿ ರೂ. ನೀಡುವುದಾಗಿ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಹೇಳಿದ್ದಾರೆ.

ನಗರದಲ್ಲಿ ಸೋಮವಾರ ಏರ್ಪಡಿಸಿದ್ದ 6ಕೆಜಿ ನಂದಿನಿ ಮೊಸರು ಜಂಬೋ ಪ್ಯಾಕೆಟ್ ಬಿಡುಗಡೆ ಮಾಡಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು. ನಂದಿನಿ ಹಾಲು ವಿದೇಶದಲ್ಲೂ ಜನಪ್ರಿಯವಾಗಿದ್ದು, ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರದಲ್ಲಿ ಅತ್ಯುನ್ನತ ಸ್ಥಾನ ಪಡೆಯಲಿದೆ ಎಂದರು.ಸಮಾರಂಭದಲ್ಲಿ ಡಾ.ಶಾಂತರಾಮ ಶೆಟ್ಟಿ, ದ.ಕ.ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ರಾಜ್ಯ ಸಹಕಾರ ಇಲಾಖೆಯ ನಿಬಂಧಕ ಆರ್ ಎಸ್ ನೂಲಿ, ಒಕ್ಕೂಟದ ಅಧ್ಯಕ್ಷ ಪಿ.ಬಿ.ದಿವಾಕರ್ ರೈ ಹಾಗೂ ಸಹಕಾರ ಇಲಾಖೆಯ ಅಧಿಕಾರಿಗಳು,ಸಿಬ್ಬಂದಿಗಳು ಭಾಗವಹಿಸಿದ್ದರು.