Thursday, November 5, 2009

ಸೋಮೇಶ್ವರ ಪಂಚಾಯಿತಿ ವ್ಯಾಪ್ತಿ: ಸರ್ಕಾರಿ ಜಮೀನು ಅತಿಕ್ರಮಣ ತೆರವು ಕಾರ್ಯಾಚರಣೆ

ಮಂಗಳೂರು,ನ.5:ಸೋಮೇಶ್ವರ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ನೂರು ಎಕರೆಗೆ ಹೆಚ್ಚಿನ ಸರ್ಕಾರಿ ಜಮೀನಿನಲ್ಲಿ ಸಿ ಆರ್ ಝಡ್ ಕಾನೂನು ಉಲ್ಲಂಘಿಸಿ ಹಾಗೂ ಸರ್ಕಾರಿ ಜಮೀನನ್ನು ಅತಿಕ್ರಮಿಸಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಜಿಲ್ಲಾಧಿಕಾರಿ ವಿ.ಪೊನ್ನುರಾಜ್ ಅವರ ನಿರ್ದೇಶನದಂತೆ ಸಹಾಯಕ ಆಯುಕ್ತ ಪ್ರಭುಲಿಂಗ ಕವಳಿಕಟ್ಟಿ ಅವರ ನೇತೃತ್ವದಲ್ಲಿ ನಡೆಯಿತು.
ಸೋಮೇಶ್ವರ ಸಮುದ್ರ ತೀರದಲ್ಲಿ ಸರ್ಕಾರಿ ಜಮೀನು ಅತಿಕ್ರಮಿಸಿ ನಿರ್ಮಿಸಲಾಗಿದ್ದ ಹರೀಶ್ ಉಚ್ಚಿಲ ,ಕಮಲ,ಮೀರ್ ಇಮ್ತಿಯಾಜ್ ಅಹಮದ್ ಅವರ ಕಟ್ಟಡಗಳನ್ನು ತೆರವುಗೊಳಿಸಿದ್ದು, ಸುತ್ತಮುತ್ತಲಿನ 4 ಕಾಂಪೌಂಡ್ ಗೋಡೆಗಳನ್ನು ಕೆಡವಲಾಗಿದೆ.ಅಜಿತ್ ಮಲ್ಲಿ,ಪ್ರಮೋದ್ ರೈ,ಜೋಸೆಫ್ ಸಲ್ಡಾನಾ ಅವರು ಕಟ್ಟಡ ತೆರವಿಗೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದು, ಈ ಮೂರು ಹೊರತುಪಡಿಸಿ ಉಳಿದೆಲ್ಲ ಅಕ್ರಮ ಕಟ್ಟಡಗಳನ್ನು ಇಂದು ತೆರವುಗೊಳಿಸಲಾಗುವುದು ಎಂದು ಸಹಾಯಕ ಆಯುಕ್ತರು ತಿಳಿಸಿದ್ದಾರೆ.
ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪೊನ್ನುರಾಜ್, ಎಸ್ಪಿ ಡಾ. ಸುಬ್ರಹ್ಮಣ್ಯೇಶ್ವರ ರಾವ್, ಉಪಸ್ಥಿತರಿದ್ದರು, ಸ್ಥಳದಲ್ಲಿ ಪೊಲೀಸ್ ಮತ್ತು ಗೃಹರಕ್ಷಕ ದಳ ಬಿಗು ಬಂದೋಬಸ್ತು ಏರ್ಪಡಿಸಿತ್ತು.