



ಮಂಗಳೂರು, ಜ.7: ಬಂಟ್ವಾಳ, ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ 21.12.09 ರಿಂದ 7.01.10 ರವರೆಗೆ ಮಾಹಿತಿ ಹಕ್ಕು ಕಾಯಿದೆ ಬಗ್ಗೆ ವಾರ್ತಾ ಇಲಾಖೆ, ಸ್ಥಳೀಯ ಸಂಸ್ಥೆ, ಧರ್ಮಸ್ಥಳ ಗ್ರಾಮಾ ಭಿವೃದ್ಧಿ, ಸ್ತ್ರೀ ಶಕ್ತಿ ಸಂಘಟನೆ ಮತ್ತು ಶಾಲೆಗಳ ಸಹಕಾರ ದಿಂದ ಪ್ರಚಾರ ಆಂದೋಲನ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದು, ಈ ಸಂದರ್ಭದಲ್ಲಿ ಜಾನಪದ ಸಂಗೀತ ಬೀದಿ ನಾಟಕವನ್ನು ಏರ್ಪಡಿಸಲಾಗಿತ್ತು. ಜ.9ವರೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.