Tuesday, January 26, 2010

ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ, ಮುಖ್ಯಮಂತ್ರಿ ನಿಧಿಗೆ ರೂ. 2,63,22,839 ದೇಣಿಗೆ

ಮಂಗಳೂರು,ಜ.26:ದಕ್ಷಿಣ ಕನ್ನಡ ಜಿಲ್ಲೆಯ ಮತ್ತು ರಾಜ್ಯದ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಿದ್ದು,ಎಲ್ಲಾ ಸ್ತರಗಳಲ್ಲಿ, ಎಲ್ಲರ ಅಭಿವೃದ್ಧಿಗೆ ಕೈಗೊಂಡ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಆಡಳಿತ ಯಂತ್ರವನ್ನು ಸರಳಗೊಳಿಸಲು ಹಲವಾರು ವಿನೂತನ ಕ್ರಮಗಳನ್ನು ಜಿಲ್ಲಾಡಳಿತ ಜಾರಿಗೆ ತಂದಿದೆ ಎಂದು ಜೀವಿಶಾಸ್ತ್ರ,ಪರಿಸರ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಕೃಷ್ಣ ಪಾಲೆಮಾರ್ ಅವರು ಹೇಳಿದರು.

ಅವರಿಂದು 60 ನೇ ಗಣ ರಾಜ್ಯೋ ತ್ಸವದಲ್ಲಿ ನಗರದ ನೆಹರು ಮೈದಾನದಲ್ಲಿ ಧ್ವಜಾ ರೋಹಣ ಮತ್ತು ಗಣ ರಾಜ್ಯೋತ್ಸವ ಸಂದೇಶ ನೀಡಿ ಮಾತ ನಾಡುತ್ತಿದ್ದರು.ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಸವಿವರ ಚಿತ್ರಣ ನೀಡಿದ ಅವರು ಜಿಲ್ಲೆಯಲ್ಲಿ ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ವಿವಿಧ ಯೋಜನೆಗಳಿಗೆ 950 ಕೋಟಿ ರೂ.ಗಳನ್ನು ವ್ಯಯಿಸಿ ಪ್ರಗತಿ ಸಾಧಿಸಿರುವುದು ದಾಖಲೆ ಎಂದರು.

ಭೂ ಸುಧಾರಣಾ ಕಾಯ್ದೆ ಮೇರೆಗೆ ಮಂಜೂ ರಾಗಿರುವ ಜಮೀನು ಗಳನ್ನು ಕೃಷಿ ಯೇತರ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡುವ ಬಗ್ಗೆ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸ್ವೀಕರಿಸಿ, ಕಂದಾಯ ನಿರೀಕ್ಷಕರಿಂದ ವರದಿಯನ್ನು ನೇರವಾಗಿ ಜಿಲ್ಲಾಧಿಕಾರಿಗಳೇ ಪಡೆಯುವ ಸರಳೀಕೃತ ವ್ಯವಸ್ಥೆಯನ್ನು ರಾಜ್ಯದಲ್ಲೇ ಪ್ರಥಮವಾಗಿ ಮಂಗಳೂರು ಹಾಗೂ ಬಂಟ್ವಾಳ ತಾಲೂಕುಗಳಲ್ಲಿ ಪ್ರಯೋಗಿಕವಾಗಿ ಜಾರಿಗೆ ತರಲಾಗುತ್ತದೆ,ಸಾರ್ವಜನಿಕರು ಭೂಪರಿವರ್ತನಾ ಅರ್ಜಿಗಳನ್ನು ಗ್ರಾಮ ಪಂಚಾಯತ್ ಅಥವಾ ನೆಮ್ಮದಿ ಕೇಂದ್ರಗಳ ಮೂಲಕ ಸಲ್ಲಿಸಬಹುದು ಎಂದರು.

ಸಮಾ ರಂಭದಲ್ಲಿ ಮುಖ್ಯ ಮಂತ್ರಿ ಸಂತ್ರಸ್ತರ ನಿಧಿಗೆ ಜಿಲ್ಲೆಯಿಂದ ಸಂಗ್ರಹಿ ಸಲಾದ 2,63,22,839 ರೂ.ಗಳನ್ನು ಜಿಲ್ಲಾ ಧಿಕಾರಿಗಳು ಸಚಿವರ ಮೂಲಕ ಸರ್ಕಾರಕ್ಕೆ ಹಸ್ಥಾಂತರಿಸಿದರು. 16 ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆದ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು. ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತರನ್ನು ಹಾಗೂ ಕೃಷಿ ಪ್ರಶಸ್ತಿ ವಿಜೇತರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.ಮುಖ್ಯ ಅತಿಥಿಗಳಾಗಿ ಕೆ.ಸಂತೋಷ್ ಕುಮಾರ್ ಭಂಡಾರಿ,ಶಾಸಕರಾದ ಎನ್. ಯೋಗೀಶ್ ಭಟ್, ಯು.ಟಿ.ಖಾದರ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ನಾಗರಾಜ ಶೆಟ್ಟಿ, ಮಹಾಪೌರ ಎಂ.ಶಂಕರ್ ಭಟ್,ಜಿಲ್ಲಾಧಿಕಾರಿ, ಐಜಿಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,ಗೃಹ ರಕ್ಷಕದಳದ ಹಿರಿಯ ಅಧಿಕಾರಿಗಳು ಸೇರಿದಂತೆ ಆನೇಕ ಗಣ್ಯರು ಉಪಸ್ಥಿತರಿದ್ದರು.