Thursday, January 6, 2011

ಮಂಗಳೂರು ನಾಗರೀಕರ ಸುಖಕರ ಪ್ರಯಾಣಕ್ಕೆ ksrtc ಬಸ್ ಗಳು

ಮಂಗಳೂರು ಜನವರಿ 06:ಖಾಸಗಿ ಬಸ್ಸುಗಳ ಮೇಲಾಟದಿಂದ ಮಂಗಳೂರು ನಾಗರೀಕರಿಗೆ ಪ್ರಯಾಣ ಪ್ರಯಾಸವಾಗಿದ್ದು,ಇದರಿಂದ ಮುಕ್ತಿ ಹೊಂದಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನಗರ ಸಾರಿಗೆ ಬಸ್ ಗಳನ್ನು ಓಡಿಸಲು ಪರವಾನಗಿ ನೀಡುವಂತೆ ಕೆಎಸ್ ಆರ್ ಟಿ ಸಿ ಕಾನೂನು ಅಧಿಕಾರಿ ರಾಜೇಶ್ ಶೆಟ್ಟಿ ಅವರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಸುಬೋಧ್ ಯಾದವ್ ಅವರನ್ನು ಕೋರಿದ್ದಾರೆ.
ಅವರು ಇಂದು ಜಿಲ್ಲಾಧಿ ಕಾರಿಗಳ ಕಚೇರಿ ಆವರಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿ ಕಾರದ ಸಭೆ ಯಲ್ಲಿ ಈ ವಿಷಯವನ್ನು ಪ್ರಾಧಿಕಾರದ ಅಧ್ಯಕ್ಷರ ಅವಗಾಹನೆಗೆ ತಂದರು.ಕೆಎಸ್ಆರ್ ಟಿಸಿಯಿಂದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಿಯಾಯಿತಿ,ಕುರುಡರು,ಅಂಗವಿಕಲರುಗಳಿಗೆ ಉಚಿತ ಪಾಸ್ ಹಾಗೂ ಹಿರಿಯ ನಾಗರೀಕರಿಗೆ ರಿಯಾಯಿತಿ ದರಗಳಲ್ಲಿ ಉತ್ತಮ ಸಾರಿಗೆ ವ್ಯವಸ್ಥೆ ದೊರಕಿಸಲಾಗುತ್ತಿದೆ. ಕೆಎಸ್ಆರ್ ಟಿ ಸಿ ಸೇವಾ ಮನೋಭಾವದಿಂದ ಕೂಡಿದ ಸಂಸ್ಥೆಯಾಗಿದೆ ಎಂದರು.ಈ ಬಗ್ಗೆ ಖಾಸಗಿ ಬಸ್ ಮಾಲೀಕರ ಪರವಾಗಿ ಸಭೆಯಲ್ಲಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಇಂದಿನ ಆರ್ ಟಿ ಎ ಸಭೆಯಲ್ಲಿ ನ್ಯಾಯಾಲಯದಿಂದ ಆದೇಶಿಸಲ್ಪಟ್ಟು ಸಮಾರು 127 ಮೊಕದ್ದಮೆಗಳನ್ನು ಚರ್ಚಿಸಲಾಯಿತು. ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಸೇವಾ ನಾಯಕ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಸುಬ್ರಹ್ಮಣ್ಯೇಶ್ವರ ರಾವ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಪ್ರಭಾಕರ್ಮತ್ತು ಮುತ್ತುರಾಯ ಕೆಎಸ್ಆರ್ಟಿಸಿ ಡಿಟಿಒ ದೀಪಕ್ ಕುಮಾರ್ ಮಂತಾದವರು ಹಾಜರಿದ್ದರು.