Wednesday, February 9, 2011

ಜಿಲ್ಲೆಯಲ್ಲಿ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು -ಸುಬೋಧ್ ಯಾದವ್

ಮಂಗಳೂರು,ಫೆಬ್ರವರಿ.09:ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 95 ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ಗುರುತಿಸಲಾಗಿದ್ದು,ಅವುಗಳ ತೆರವಿಗೆ ನೀಡಿದ್ದ ಕಾಲಮಿತಿಯಂತೆ ಈಗಾಗಲೇ 33 ಕಟ್ಟಡಗಳನ್ನು ತೆರವುಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಸುಬೋಧ್ ಯಾದವ್ ತಿಳಿಸಿದ್ದಾರೆ.

ಅವರು ಇಂದು ತಮ್ಮ ಕಚೇರಿ ಯಲ್ಲಿ ಈ ಕುರಿತು ನಡೆಸಿದ ಪ್ರಗತಿ ಪರಿ ಶೀಲನಾ ಸಭೆಯ ಅಧ್ಯ ಕ್ಷತೆ ವಹಿಸಿ ಮಾತ ನಾಡುತ್ತಿದ್ದರು.ಇನ್ನು 37 ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ಗುರುತಿಸಲಾಗಿದ್ದು ಇವುಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿಗಳು ಮಂಗಳೂರು ಹಾಗೂ ಪುತ್ತೂರು ಉಪವಿಭಾಗಾಧಿಕಾರಿಗಳಿಗೆ ಹಾಗೂ ಎಲ್ಲಾ ತಹಶೀಲ್ದಾರರಿಗೆ ಸೂಚಿಸಿದರು.
ಅನಧಿಕೃತ ಧಾರ್ಮಿಕ ಕಟ್ಟಡಗಳೆಂದು ಗುರುತಿಸಿದ್ದ ಪಟ್ಟಿಯಲ್ಲಿ 15 ಧಾರ್ಮಿಕ ಕಟ್ಟಡಗಳಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗುತ್ತಿಲ್ಲ ಎಂಬುದನ್ನು ಪರಿಶೀಲಿಸಿದ್ದು ಇವುಗಳನ್ನು ಸಕ್ರಮಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವುಗೊಳಿಸುವ ಪ್ರಕ್ರಿಯೆಗೆ ನ್ಯಾಯಾಲಯದಲ್ಲಿ ಮೊಕದ್ದಮೆ ಇದ್ದರೂ ಸಹ ವಿವೇಚನೆಯಿಂದ ಅಂತಹ ಅನಧಿಕೃತ ಕಟ್ಟಡಗನ್ನು ತೆರವುಗೊಳಿಸಬಹುದೆಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸ್ಪಷ್ಟಪಡಿಸಿದರು.
ಸಭೆಯಲ್ಲಿ ಜಿಲ್ಲೆಯ ಉಪವಿಭಾಗಾಧಿಕಾರಿಗಳು ಮತ್ತು ಎಲ್ಲಾ ತಾಲ್ಲೂಕಿನ ತಹಶೀಲ್ದಾರರುಗಳು ಹಾಜರಿದ್ದರು.