Saturday, August 20, 2011

ರಾಷ್ಟ್ರ ಅಭಿವೃದ್ಧಿಗೆ ಶೈಕ್ಷಣಿಕ ಕ್ರಾಂತಿ ಕಾರಣ: ಡಾ.ಹೆಗ್ಗಡೆ

ಮಂಗಳೂರು,ಆಗಸ್ಟ್.20:ಸ್ವಾತಂತ್ರ್ಯ ಭಾರತದಲ್ಲಾದ ಬದಲಾವಣೆ ಮತ್ತು ಸಾಮಾಜಿಕ ಅಭಿವೃದ್ಧಿಗೆ ನಮ್ಮ ಶಿಕ್ಷಣ ವ್ಯವಸ್ಥೆ ಅತ್ಯಮೂಲ್ಯ ಕೊಡುಗೆ ನೀಡಿದೆ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗ ಣದಲ್ಲಿ ಇಂದು ಜಿ.ಪಂ. ಸಾರ್ವ ಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಜಂಟಿಯಾಗಿ ಹಮ್ಮಿ ಕೊಂಡಿದ್ದ 'ಗುಣಾತ್ಮಕ ಶಿಕ್ಷಣಕ್ಕಾಗಿ ಕ್ರಿಯಾಶೀಲ ಆಡಳಿತ' ಕುರಿತ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಮಾಹಿತಿ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ದಿಕ್ಸೂಚಿ ಭಾಷಣ ನೀಡಿದರು.
ವಿಶ್ವದಲ್ಲಿ ಇಂದು ಭಾರತ ಪ್ರಬಲ ರಾಷ್ಟ್ರವಾಗಿ ಗುರುತಿಸಿ ಕೊಳ್ಳುವಲ್ಲಿ ನಮ್ಮ ಶೈಕ್ಷಣಿಕ ವ್ಯವಸ್ಥೆ ಪ್ರಮುಖ ಕಾರಣ ವಾಗಿದೆ. ಗ್ರಾಮೀಣ ಪ್ರದೇಶ ದಲ್ಲಿಯೂ ಇಂದು ಕೈಗೆಟಕುವ, ಗುಣಮಟ್ಟದ ಶಿಕ್ಷಣ ಸರಕಾರ ನೀಡಿದೆ. ಗುಣ ಗ್ರಹಣ ಶಕ್ತಿಗೆ ಪ್ರೋತ್ಸಾಹ ಇನ್ನಷ್ಟು ಬೇಕಿದೆ ಎಂದ ಅವರು, ಅಕ್ಷರ ದಾಸೋಹದ ಪರಿಕಲ್ಪನೆಯಿಂದ ಎಲ್ಲ ಮಕ್ಕಳು ಇಂದು ಶಾಲೆಯಲ್ಲಿದ್ದಾರೆ. ಇದರಿಂದಿ ಪರೋಕ್ಷವಾಗಿ ಹಾಗೂ ನೇರವಾಗಿ ಹಲವರಿಗೆ ಉದ್ಯೋಗ ಲಭಿಸಿದೆ ಎಂದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರಕಾರದ ಕಾರ್ಯದರ್ಶಿ ಕುಮಾರ್ ನಾಯಕ್ ಮಾತನಾಡಿ, ಅಧಿಕಾರಿಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.ಶಿಕ್ಷಣ ಕ್ಷೇತ್ರಕ್ಕೆ ಸರಕಾರದ ಅನುದಾನ ಇಂದು 10,100 ಕೋಟಿ. ವಿಫುಲ ಅನುದಾನ ಶಿಕ್ಷಣ ಕ್ಷೇತ್ರಕ್ಕೆ ಲಭ್ಯವಿದೆ. ಪ್ರಮಾಣದಲ್ಲಿ ಹೆಚ್ಚಿದ್ದು, ಅಕ್ಷರ ದಾಸೋಕ್ಕೆ ಆರಂಭದಲ್ಲಿದ್ದ 320 ಕೋಟಿ ರೂ. ಅನುದಾನವನ್ನು 850 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ 99,000 ಮಹಿಳೆಯರು ಕಾರ್ಯ ನಿರ್ವಹಿಸುತ್ತಿದ್ದು, ಪ್ರತಿನಿತ್ಯ 69ರಿಂದ 70 ಲಕ್ಷ ವಿದ್ಯಾರ್ಥಿಗಳು ಈ ಯೋಜನೆಯ ಉಪಯೋಗ ಪಡೆಯುತ್ತಿದ್ದಾರೆ ಎಂದರು.
ಜಿಲ್ಲಾಧಿಕಾರಿ ಡಾ. ಚೆನ್ನಪ್ಪ ಗೌಡ ಮಾತನಾಡಿ, ಜಿಲ್ಲೆಯಲ್ಲಿ 2,23,000 ವಿದ್ಯಾರ್ಥಿಗಳು ಅಕ್ಷರ ದಾಸೋಹ ಯೋಜನೆಯ ಲಾಭ ಪಡೆಯುತ್ತಿದ್ದು, ಪ್ರತಿ ತಿಂಗಳು ಈ ಯೋಜನೆಗಾಗಿ ಸರಕಾರ 2ಕೋಟಿ 60 ಲಕ್ಷ ರೂ.ಗಳನ್ನು ಖರ್ಚು ಮಾಡುತ್ತಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿ.ಪಂ. ಅಧ್ಯಕ್ಷೆ ಕೆ.ಟಿ. ಶೈಲಜಾ ಭಟ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಿಜಯ ಪ್ರಕಾಶ್, ಮಧ್ಯಾಹ್ನ ಉಪಹಾರ ಯೋಜನೆಯ ಜಂಟಿ ನಿರ್ದೇಶಕ ಬಿ.ಜಿ. ನಾಯ್ಕ್, ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಜಂಟಿ ನಿರ್ದೇಶಕಿ ಹಾಗೂ ಪ್ರಾಂಶುಪಾಲರಾದ ಫಿಲೋಮಿನಾ ಲೋಬೋ ಉಪಸ್ಥಿತರಿದ್ದರು.
ಜಿಲ್ಲಾ ಶಿಕ್ಷಣ ಉಪನಿರ್ದೇಶಕ ಮೋಸೆಸ್ ಜಯಶೇಖರ್ ಸ್ವಾಗತಿಸಿದರು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪಾಲಾಕ್ಷಪ್ಪ ವಂದಿಸಿದರು.