Friday, October 7, 2011

ಕನ್ನಡ ನುಡಿತೇರು ಉದ್ಘಾಟನಾ ಸಮಾರಂಭ

ಮಂಗಳೂರು,ಅಕ್ಟೋಬರ್.07:ಬೆಂಗಳೂರಿನ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಕನ್ನಡ ನುಡಿತೇರು ಜಾಗೃತಿ ಜಾಥಾ ಕಾರ್ಯಕ್ರಮವನ್ನು ದಿನಾಂಕ 12-10-11 ರಿಂದ 14-10-11 ರ ವರೆಗೆ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಏರ್ಪಡಿಸಲಾಗಿದೆ.ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಸುಳ್ಯ ತಾಲೂಕಿನ ಶ್ರೀ ಚೆನ್ನಕೇಶವ ದೇವಸ್ಥಾನದ ಬಯಲು ರಂಗವೇದಿಕೆಯಲ್ಲಿ 12-10-11 ರಂದು ಪೂರ್ವಾಹ್ನ 10 ಗಂಟೆಗೆ ಏರ್ಪಡಿಸಲಾಗಿದೆ. ಕನ್ನಡ ಭವನ ಶಿಲಾ ನ್ಯಾಸ ಮತ್ತು ನುಡಿ ತೇರು ಉದ್ಘಾ ಟನೆ ಯನ್ನು ಸನ್ಮಾನ್ಯ ಮುಖ್ಯ ಮಂತ್ರಿ ಗಳಾದ ಡಿ.ವಿ.ಸದಾ ನಂದ ಗೌಡ ಇವರು ನೆರ ವೇರಿಸುವರು.ಸಭಾ ಕಾರ್ಯ ಕ್ರಮದ ಉದ್ಘಾ ಟನೆ ಯನ್ನು ಶ್ರೀ ಕ್ಷೇತ್ರ ಧರ್ಮ ಸ್ಥಳದ ಧರ್ಮಾ ಧಿಕಾ ರಿಗ ಳಾದ ಡಾ.ಡಿ.ವೀ ರೇಂದ್ರ ಹೆಗ್ಗಡೆ ಯವರು ನೆರವೇರಿಸುವರು.ಜಾನಪದ ಕಲಾಜಾಥಾದ ಉದ್ಘಾಟನೆಯನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿಗಳಾದ ಡಾ.ಚಂದ್ರಶೇಖರ ಕಂಬಾರ ಇವರು ನೆರವೇರಿಸುವರು.
ಅಧ್ಯಕ್ಷತೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಸ್.ಅಂಗಾರ ವಹಿಸುವರು.ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಗೋವಿಂದ ಕಾರಜೋಳ, ಜೀವಿಶಾಸ್ತ್ರ ,ಪರಿಸರ, ಬಂದರು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಕೃಷ್ಣ ಪಾಲೇಮಾರ್,ಉನ್ನತ ಶಿಕ್ಷಣ ಸಚಿವರಾದ ಡಾ.ವಿ.ಎಸ್.ಆಚಾರ್ಯ ವಿಧಾನಸಭೆ ಉಪಾಧ್ಯಕ್ಷರಾದ ಎನ್. ಯೋಗೀಶ್ ಭಟ್ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶೈಲಜಾ ಭಟ್ಮುಂತಾದವರು ಭಾಗವಹಿಸಲಿದ್ದಾರೆ.