
ಒಂಬುಡ್ಸ್ ಮನ್ ಶೀನ ಶೆಟ್ಟಿ ಅವರು ಮಕ್ಕಳಿಗೆ ಶಿಕ್ಷಣದ ಮಹತ್ವ ಮತ್ತು ಸ್ವಚ್ಚತೆಯ ಮಹತ್ವದ ಬಗ್ಗೆ ವಿವರಿಸಿ ಉತ್ತಮ ಪ್ರವಾಸ ಕಥನ ಬರೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವ ಭರವಸೆಯೊಂದಿಗೆ ಶುಭ ಹಾರೈಸಿದರು.
ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅರುಣ್ ಫುರ್ಟಡೋ, ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫಡ್ ಲೋಬೊ, ಜನಶಿಕ್ಷಣ ಟ್ರಸ್ಟ್ ನ ಕೃಷ್ಣ ಮೂಲ್ಯ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿ ವಿದ್ಯಾರ್ಥಿಗಳನ್ನು ಬೀಳ್ಕೊಟ್ಟರು.
ಐದು ದಿನಗಳ ಈ ಶೈಕ್ಷಣಿಕ ಪ್ರವಾಸದಲ್ಲಿ ಉಡುಪಿ,ಮಣಿಪಾಲ,ಕುದುರೆ ಮುಖ,ಬೆಂಗಳೂರು,ಮೈಸೂರು, ಮಡಿಕೇರಿ ಮುಂತಾದ ಕಡೆಗಳಲ್ಲಿ ಹಲವಾರು ಪ್ರೇಕ್ಷಣೀಯ ಸ್ಥಳಗಳನ್ನು ವಿದ್ಯಾರ್ಥಿಗಳು ಸಂದರ್ಶಿಸಲಿದ್ದಾರೆ. ನವೆಂಬರ್ 14 ಮಕ್ಕಳ ದಿನಾಚರಣೆಯಂದು ವಿಧಾನ ಸೌಧದ ಮುಂಭಾಗಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಪ್ರವಾಸದ ವಿದ್ಯಾರ್ಥಿಗಳನ್ನು ಭೇಟಿಯಾಗಲಿದ್ದಾರೆ.