Friday, January 27, 2012

ಏಪ್ರಿಲ್ ನೊಳಗೆ ಸಿಂಥೆಟಿಕ್ ಟ್ರ್ಯಾಕ್ ಪೂರ್ಣ: ಯೋಗೀಶ್ ಭಟ್

ಮಂಗಳೂರು,ಜನವರಿ.27:ಜಿಲ್ಲೆಯ ಜನತೆಯ ಬಹುವರ್ಷಗಳ ಬೇಡಿಕೆ ಮಂಗಳಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಉಪಸಭಾಧ್ಯಕ್ಷರಾದ ಎನ್ ಯೋಗೀಶ್ ಭಟ್ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು.ಮುಖ್ಯ ಮಂತ್ರಿಗಳು ಯುವ ಜನೋತ್ಸವ ಸಮಾರಂಭದಲ್ಲಿ ಘೋಷಿಸಿದಂತೆ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಅನುಷ್ಠಾನಕ್ಕೆ ಇಂದಿನಿಂದ ಚಾಲನೆ ದೊರೆತಿದ್ದು, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ವಿಶೇಷ ಕಾಳಜಿ ವಹಿಸಲಾಗಿದೆ ಎಂದು ಬಳಿಕ ಪತ್ರಕರ್ತರೊಂದಿಗೆ ಮಾತ
ನಾಡುತ್ತಾ ಉಪಸಭಾಧ್ಯಕ್ಷರು ಹೇಳಿದರು.
ಟ್ರ್ಯಾಕ್ ನ್ನು 1ಡಿಗಿಂತ 2ಡಿಗೆ ಬದಲಾಯಿಸಲು ಕ್ರಮಕೈಗೊಳ್ಳಲಾಗಿದ್ದು, ಜಿಲ್ಲೆಯಿಂದ ಒಲಿಂಪಿಕ್ಕ್ ನಲ್ಲಿ ಪಾಲ್ಗೊಳ್ಳುವ ಕ್ರೀಡಾಳುಗಳು ಸೃಷಿಯಾಗಬೇಕೆಂಬುದು ತಮ್ಮ ಅಭಿಲಾಷೆ ಎಂದರು. ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಮತ್ತು ಕೇಂದ್ರ ಸಕರ್ಾರದ ಸಹಾಯ ನಿರಂತರವಾಗಿರಲೆಂದು ಇಚ್ಚಿಸಿದ ಅವರು, ಮಾದರಿ ಕ್ರೀಡಾಂಗಣ ನಿರ್ಮಾಣವಾಗಲಿ ಎಂದು ಶುಭ ಹಾರೈಸಿದರು.
ಕಾಮಗಾರಿಯಲ್ಲಿ ಗುಣಮಟ್ಟ ಪರಿಶೀಲನೆಗೆ ಥರ್ಡ್ ಪಾರ್ಟಿ ಇನ್ಸ್ ಪೆಕ್ಷನ್ ಹಾಗೂ ಪ್ರತ್ಯೇಕ ತಜ್ಞರ ಸಮಿತಿ ನೇಮಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ತಿಳಿಸಿದರು.
ಮಂಗಳಾ ಕ್ರೀಡಾಂಗಣದಲ್ಲಿ 400 ಮೀ. ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಸರ್ಕಾರದಿಂದ 3.15 ಕೋಟಿ ರೂ. ಬಿಡುಗಡೆಯಾಗಿದೆ. ರೂ. 3.09 ಕೋಟಿ ವೆಚ್ಚದಲ್ಲಿ ಕಾಮಗಾರಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಹಣವನ್ನು ಜಿಲ್ಲಾ ಕ್ರೀಡಾಂಗಣ ಸಮಿತಿಗೆ ಬಿಡುಗಡೆಯಾಗಿದೆ. ಟೆಂಡರ್ ಮೆ. ಸಿಂಕಾಟ್ಸ್ ಇಂಟರ್ ನ್ಯಾಷನಲ್ ನವದೆಹಲಿ ಇವರಿಗೆ ನೀಡಲಾಗಿದೆ..
ಭೂಮಿ ಪೂಜೆ ಸಮಾರಂಭದಲ್ಲಿ ಶಾಸಕರಾದ ಯು ಟಿ ಖಾದರ್, ಜಿಲ್ಲಾಧಿಕಾರಿ ಡಾ ಎನ್ ಎಸ್ ಚನ್ನಪ್ಪಗೌಡ, ಪಾಲಿಕೆ ಆಯುಕ್ತರಾದ ಡಾ ಹರೀಶ್ ಕುಮಾರ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಪಾಶ್ರ್ವನಾಥ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ಶರಣಬಸಪ್ಪ, ತೇಜೋಮಯ ಮುಂತಾದವರು ಉಪಸ್ಥಿತರಿದ್ದರು.