ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಆದರೆ ಯಾರಿಂದಲೂ ಆಕ್ಷೇಪಣೆಗಳು ಬಂದಿಲ್ಲ ಎಂದ ಅವರು ಚುನಾವಣೆಗೆ ಉಮೇದುವಾರಿಕೆಗಳನ್ನು ಸಲ್ಲಿಸಲು 21-3-12 ರಿಂದ 28-3-12 ರ ವರೆಗೆ ಪ್ರತೀದಿನ ಬೆಳಿಗ್ಗೆ 11 ರಿಂದ ಸಂಜೆ 5 ರ ವರೆಗೆ ಅವಕಾಶ ಕಲ್ಪಿಸಲಾಗಿದೆಯೆಂದು ಅವರು ತಿಳಿಸಿದರು.ನಾಮಪತ್ರಗಳ ಪರಿಶೀಲನೆಯನ್ನು 31-3-12 ರಂದು ಬೆಳಿಗ್ಗೆ 11 ಗಂಟೆಗೆ ತಾಲ್ಲೂಕು ಕಚೇರಿ ಮಂಗಳೂರಿನಲ್ಲಿ ಅಭ್ಯರ್ಥಿ ಅಥವಾ ಅವರು ಸೂಚಿಸುವ ಸೂಚಕರ ಸಮಕ್ಷಮ ನಡೆಸಲಾಗುವುದು.. 5-4-12 ರಂದು ಅಪರಾಹ್ನ 3 ಗಂಟೆಯೊಳಗೆ ನಾಮಪತ್ರಗಳನ್ನು ಹಿಂಪಡೆಯಬಹುದಾಗಿದೆ. ಚುನಾವಣೆ ಆವಶ್ಯವಿದ್ದಲ್ಲಿ ಎಪ್ರಿಲ್ 29 ರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಎಲ್ಲಾ ತಾಲೂಕು ಕಚೇರಿ ಆವರಣದ ಮತಗಟ್ಟೆಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ.ಅಂದೇ ಚುನಾವಣಾ ಮತಗಳ ಎಣಿಕೆ ಕಾರ್ಯ ನಡೆಯಲಿದೆಯೆಂದು ಅವರು ತಿಳಿಸಿರುತ್ತಾರೆ.
ಚುನಾವಣೆಗೆ ಹಿಂದಿನಂತೆ ಈ ಬಾರಿಯೂ ಮೂಲ್ಕಿಯಲ್ಲಿ ಹೆಚ್ಚುವರಿ ಮತದಾನ ಕೇಂದ್ರ ಸ್ಥಾಪಿಸಲು ಅನುಮತಿಗಾಗಿ ಪತ್ರ ಬರೆಯಲಾಗಿದ್ದು ,ಅನುಮತಿ ದೊರೆತಲ್ಲಿ ಹೆಚ್ಚುವರಿ ಮತದಾನ ಕೇಂದ್ರವನ್ನು ತೆರೆಯಲಾಗುವುದೆಂದರು.