Saturday, April 7, 2012

ಲಾಯಿಲಾಕ್ಕೆ ರಾಷ್ಟ್ರೀಯ ಗೌರವ್ ಗ್ರಾಮಸಭಾ ಪ್ರಶಸ್ತಿ 2012

ಮಂಗಳೂರು,ಏಪ್ರಿಲ್.07:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮಪಂಚಾಯತ್ ಗೆ ರಾಷ್ಟ್ರೀಯ ಗೌರವ್ ಗ್ರಾಮಸಭಾ ಪ್ರಶಸ್ತಿ-2012 ಲಭಿಸಿದೆ.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಧಾಕರ ವಿ ಎನ್ ಅವರು ಏಪ್ರಿಲ್ 24ರಂದು ದೆಹಲಿಯ ವಿಜ್ಞಾನ್ ಭವನದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದು, ಕಳೆದ ಎರಡು ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮೂರು ರಾಷ್ಟ್ರೀಯ ಪ್ರಶಸ್ತಿಗಳನ್ನು ಗಳಿಸಿದೆ.
ಪ್ರಶಸ್ತಿಯ ಮೊತ್ತ ರೂ. 5ಲಕ್ಷ. ಪಂಚಾಯತ್ ಪಿಡಿಒ ಪ್ರಕಾಶ್ ಶೆಟ್ಟಿ. ಸಮಗ್ರವಾಗಿ ಗ್ರಾಮ ಸಭೆಗಳನ್ನು ನಿಯಮಿತವಾಗಿ ನಡೆಸಿಕೊಂಡ ಬಂದ ಹೆಗ್ಗಳಿಕೆಗೆ ಈ ಪ್ರಶಸ್ತಿ ಲಭ್ಯವಾಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕೆ.ಟಿ.ಶೈಲಜಾ ಭಟ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ವಿಜಯಪ್ರಕಾಶ್ ಪ್ರಶಸ್ತಿ ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.