Wednesday, June 6, 2012

ಕೃತಕ ನೆರೆಗೆ ವಿಶೇಷ ತಂಡ: ಜಿಲ್ಲಾಧಿಕಾರಿ

ಮಂಗಳೂರು, ಜೂನ್.06: ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ಮಳೆ ನೀರು ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ನಿಂತು ಸುಗಮ ಸಂಚಾರಕ್ಕೆ ಅಡಚಣೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಮತ್ತು ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಹಾಗೂ ಸಂಬಂಧಿಸಿದ ಇಂಜಿನಿಯರುಗಳ ಸಭೆಯನ್ನು ಮಂಗಳವಾರದಂದು ಜಿಲ್ಲಾಧಿಕಾರಿ ಡಾ|ಎನ್.ಎಸ್.ಚನ್ನಪ್ಪಗೌಡರು ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.ಜನರ ಸಮಸ್ಯೆಗೆ ತುರ್ತಾಗಿ ಸ್ಪಂದಿಸಲು ವಿಶೇಷ ತಂಡಗಳನ್ನು ರಚಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.ಕೂಳೂರು,ಕೊಟ್ಟಾರಚೌಕಿ, ನಂತೂರು, ಪಂಪ್ವೆಲ್,ಕಣ್ಣೂರು ಮತ್ತು ಪಡೀಲ್ ಪರಿಸರಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚರಂಡಿ ಮೋರಿಗಳನ್ನು ಸ್ವಚ್ಚಗೊಳಿಸಿ ಮಳೆನೀರು ಹರಿದುಹೋಗಲು ಮಂಗಳೂರು ಮಹಾನಗರಪಾಲಿಕೆ ಕೂಡಲೇ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದ ನಗರಪಾಲಿಕೆ ಆಯುಕ್ತರಾದ ಶ್ರೀಹರೀಶ್ಕುಮಾರ್ ಅವರಿಗೆ ಸೂಚಿಸಿದರು. ಈಗಾಗಲೇ ಮೇಲ್ಕಂಡ ಸ್ಥಳಗಳಲ್ಲಿ ಇದ್ದ ಪೈಪ್ಲೈನ್ಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕಾರ್ಯವನ್ನು ರೂ.9ಕೋಟಿ ವೆಚ್ಚದಲ್ಲಿ ಕೈಗೊಂಡಿದ್ದು, ಇನ್ನುಳಿದ ಪೈಪ್ಗಳನ್ನು ಸಹ ಸ್ಥಳಾಂತರಿಸು ವುದಾಗಿ ತಿಳಿಸಿದರು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಗವಸಾನಿ ಮುಂತಾದವರು ಹಾಜರಿದ್ದರು.