Tuesday, June 5, 2012

ಕರಾವಳಿಯಲ್ಲಿ ಮೀನುಗಾರಿಕೆ ಚಟುವಟಿಕೆ ನಿಷೇಧ

ಮಂಗಳೂರು, ಜೂನ್.05: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳು ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಸಾಧನಗಳನ್ನುಉಪಯೋಗಿಸಿ ಎಲ್ಲಾ ಯಾಂತ್ರಿಕ ದೋಣಿಗಳ ಮುಖಾಂತರ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಇನ್ ಬೋರ್ಡ್ ಅಥವಾ ಔಟ್ ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 15 ದಿನಾಂಕದಿಂದ ಆಗಸ್ಟ್ 10 ನೇ ದಿನಾಂಕದ ವರೆಗೆ ಅಂದರೆ ಒಟ್ಟು 57 ದಿನಗಳ ನಿಷೇಧವನ್ನು ಹೇರಿ ಆದೇಶ ಹೊರಡಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅವರ ಯಾಂತ್ರೀಕೃತ ಮೀನುಗಾರಿಕಾ ದೋಣಿಗಳಿಗೆ ಸರ್ಕಾರದಿಂದ ನೀಡುವ ಮಾರಾಟ ಕರ ರಹಿತ ಡೀಸೀಲ್ ಅಲ್ಲದೆ ಇತರ ಯಾವುದೇ ಸಹಾಯ ಸೌಲಭ್ಯವನ್ನು ರದ್ದುಗೊಳಿಸಲಾಗುವುದೆಂದು ಮೀನುಗಾರಿಕಾ ಉಪನಿರ್ದೇಶಕರು ತಿಳಿಸಿರುತ್ತಾರೆ.