ಯೋಧ ಕೃಷ್ಣಪ್ಪ ಗೌಡ ರ ಪಾರ್ಥಿವ ಶರೀರ ಇಂದು ಹುಟ್ಟೂರರಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ತರಲಾಯಿತು. 
ಇದ
ಕ್ಕೂ ಮುನ್

ನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೃಷ್ಣಪ್ಪ ಗೌಡ ರ ಪಾರ್ಥಿವ ಶರೀರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಟಿ. ರವಿ ಅವರು ಸರ್ಕಾರದ ಪರವಾಗಿ ಪುಷ್ಪ ನಮನದ ಗೌರವ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ವಿಧಾನ ಸಭಾ ಉಪ ಸಭಾಪತಿ ಎನ್. ಯೋಗಿಶ್ ಭಟ್, ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಜಿಲ್ಲಾಧಿಕಾರಿ ಡಾ. ಚನ್ನಪ್ಪ ಗೌಡ, ಜಿಲ್ಲಾ ಪೋಲಿಸ್ ಅಧಿಕ್ಷಕ ಅಭಿಷೇಕ್ ಗೊಯಲ್, ಜಿ.ಪಂ. ಸಿಇಒ ಡಾ. ಕೆ.ಎನ್. ವಿಜಯ ಪ್ರಕಾಶ್, ಮಂಗಳೂರು ಉಪ ವಿಭಾಗ ಧಿಕಾರಿ ವೆಂಕಟೇಶ್, ಪಾಲಿಕೆ ಆಯುಕ್ತ ಡಾ. ಹರೀಶ್ ಕುಮಾರ್, ಮತ್ತಿತರ ಪೋಲಿಸ್ ಅಧಿಕಾರಿಗಳು ಅಗಲಿದ ಯೋಧ ಕೃಷ್ಣಪ್ಪರಿಗೆ ಪುಷ್ಪ ನಮನ ಸಲ್ಲಿಸಿದರು.