Wednesday, October 3, 2012

ದ.ಕ.ಜಿ.ಪಂ ಚುನಾವಣೆ;ಕೆ.ಕೊರಗಪ್ಪ ನಾಯ್ಕ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮಂಗಳೂರು, ಅಕ್ಟೋಬರ್.03: ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಎರಡನೇ ಅವಧಿಯ ಅಧ್ಯಕ್ಷರಾಗಿ ಕೆ.ಕೊಗಪ್ಪ ನಾಯ್ಕ ಮತ್ತು ಉಪಾಧ್ಯಕ್ಷರಾಗಿ  ರಿತೇಶ್ ಶೆಟ್ಟಿ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಮೈಸೂರು ಪ್ರಾದೇಶಿಕ ಆಯುಕ್ತೆ ಶ್ರೀಮತಿ ಜಯಂತಿ ಇವರು ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಇಂದು ಘೋಷಿಸಿದರು.
            ಇವರ ಅವಧಿಯು ದಿನಾಂಕ 8-10-12 ರಿಂದ 7-6-2014 ರ ವರೆಗೆ ಇರುತ್ತದೆಯೆಂದು ಈ ಸಂದರ್ಭದಲ್ಲಿ ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ವಿಜಯಪ್ರಕಾಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.