Monday, January 21, 2013

ನೇರ ನಡೆ ನುಡಿಯ ಅಂಬಿಗರ ಚೌಡಯ್ಯ ಆದರ್ಶ ಮಾನವ: ಅಮೃತ ಸೋಮೇಶ್ವರ

ಮಂಗಳೂರು, ಜನವರಿ.21:-ತನಗೆ ತೋಚಿದ್ದನ್ನು ತಾನು ಕಂಡದ್ದನ್ನು ಅಂದಿನ ಸಮಾಜದ ಅಂಕು ಡೊಂಕುಗಳನ್ನು ತನ್ನ ನೇರ ನಡೆನುಡಿಗಳಿಗೆ ವಚನ ರೂಪ ನೀಡಿದ ಅದರಂತೆ ಬದುಕಿ ಇತರರಿಗೆ ಮಾರ್ಗದರ್ಶನ ತೋರಿದ ನಿಜಶರಣ ಅಂಬಿಗರ ಚೌಡಯ್ಯ ಒಬ್ಬ ಆದರ್ಶ ಮಾನವ ಎಂದು ಹಿರಿಯ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ಅವರು ತಿಳಿಸಿದ್ದಾರೆ.
          ಅವರು ಇಂದು ಮಂಗ ಳೂರು ವಿಶ್ವ ವಿದ್ಯಾ ನಿಲಯ ಕಾಲೇ ಜಿನ ರ ವೀಂದ್ರ ಕಲಾ ಭವನ ದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಡಳಿತ,ಜಿಲ್ಲಾ ಪಂಚಾ ಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೊಗ ವೀರ ವ್ಯ ವಸ್ಥಾ ಪಕ ಮಂಡಳಿ ಇವರ ಸಂಯು ಕ್ತಾಶ್ರ ಯದಲ್ಲಿ ಆಯೋ ಜಿಸಿದ್ದ ಶ್ರೀ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಸ್ವಂತಿಕೆಯಿಂದ ಯೋಚಿಸಿ ಸ್ವಾಭಿಮಾನದ ಬದುಕನ್ನು ಬದುಕಬೇಕೆಂಬ ಅಂಶವನ್ನು ಅಂಬಿಗರ ಚೌಡಯ್ಯ ತನ್ನ ಸರಳ ಸುಲಲಿತ ವಚನಗಳಲ್ಲಿ ತಿಳಿಸಿದ್ದಾರೆ. ಜಾತೀಯತೆಯನ್ನು ಮೀರಿದ ವಸ್ತು ನಿಷ್ಠತೆ ಸತ್ಯ ನಿಷ್ಠತೆ,ಬದುಕು ನಿಜವಾದ ಬದುಕು ಎಂಬುದಾಗಿ ಪ್ರತಿಪಾದಿಸಿದ ದಿಟ್ಟ ಮಾನವತಾವಾದಿ ಎಂದರು.
ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ದಯಾನಂದ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಇಂತಹ ಜಯಂತಿಗಳು ವೈಯಕ್ತಿಕ ಸಾಧನೆಗಳಿಗೆ ಅವಕಾಶವಾಗದಂತೆ ಸಾರ್ವಜನಿಕರ ಬದುಕಿಗೆ ಸ್ಪಂದಿಸುವ ರೀತಿಯಲ್ಲಿ ಆಗಬೇಕಿದೆ. ಭಕ್ತಿಭಂಡಾರಿ ಬಸವಣ್ಣನವರ ಆಶಯದಂತೆ ಜನ ಸಾಮಾನ್ಯರಿಗೆ ಜೀವನದ ಮಹತ್ವವನ್ನು ಆಡು ಭಾಷೆಯ ವಚನಗಳ ಮೂಲಕ ತಿಳಿಸಿಕೊಟ್ಟ,ಅಂದಿನ ದಿನಗಳಲ್ಲೆ ಜಾತಿ ವಿಷ ಬೀಜ ಮೊಳಕೆಯೊಡೆಯದಂತೆ ಎಲ್ಲಾ ಕಡೆ ಬ್ರಾತೃತ್ವ ಸಮಾನತೆ ಉಂಟಾಗುವಂತೆ ತನ್ನ ವಚನಗಳನ್ನು ರಚಿಸಿದ ಅಂಬಿಗರ ಚೌಡಯ್ಯ ಸ್ತುತ್ಯಾರ್ಹರು ಎಂದರು.
  ಸಮಾರಂಭದ ಅಧ್ಯಕ್ಷತೆಯನ್ನು ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್ ವಹಿಸಿದ್ದರು.ದ.ಕ.ಜಿಲ್ಲೆ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಕೇಶವ ಕುಂದರ್,ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಮೆಂಡನ್,ಮಂಗಳೂರು ವಿಶ್ವವಿದ್ಯಾನಿಲಯದ ಅಂಬಿಗರ ಚೌಡಯ್ಯ ಪೀಠದ ಅಧ್ಯಕ್ಷರಾದ ಜಯರಾಜ್ ಅಮೀನ್,ದ.ಕ.ಜಿಲ್ಲಾಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ ಕೆ.ಎನ್.ವಿಜಯಪ್ರಕಾಶ್, ಮಹಾನಗರಪಾಲಿಕೆ ಆಯುಕ್ತರಾದ ಡಾ.ಹರೀಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.
ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ  ಮಂಗಳ ಸ್ವಾಗತಿಸಿ,ಮೊಗವೀರ ವ್ಯವಸ್ಥಾಪಕ ಮಂಡಳಿ ಅಧ್ಯಕ್ಷ ಯತೀಶ್ ಬೈಕಂಪಾಡಿ ವಂದಿಸಿದರು.