Thursday, February 28, 2013

ವರ್ಷದಲ್ಲಿ ಎರಡು ಬಾರಿ ಶಾಲಾಕಾಲೇಜುಗಳಲ್ಲಿ ಆರೋಗ್ಯ ಯುವದಿನ-ಡಾ.ವಿಜಯಪ್ರಕಾಶ್

ಮಂಗಳೂರು, ಫೆಬ್ರವರಿ. 28:-ಯುವಕರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಇನ್ನು ಮುಂದೆ ವರ್ಷದಲ್ಲಿ ಎರಡು ಬಾರಿ ಜಿಲ್ಲೆಯ ಪ್ರೌಢಶಾಲೆ/ಪದವಿಪೂರ್ವ/ಪದವಿ ಕಾಲೇಜುಗಳಲ್ಲಿ ಹದಿಹರೆಯದವರಿಗಾಗಿ ಆರೋಗ್ಯ ದಿನಾಚರಣೆಯನ್ನು ಆಚರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್.ವಿಜಯಪ್ರಕಾಶ್ ಕರೆ ನೀಡಿದ್ದಾರೆ.
ಅವರು ಇಂದು ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ಎಚ್ಐವಿ/ಏಡ್ಸ್ ನಿಯಂತ್ರಣ ಕಾರ್ಯಕ್ರಮ ಕುರಿತು ಅಂತರ ಇಲಾಖಾ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್. ಶ್ರೀರಂಗಪ್ಪ,ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಕಿಶೋರ್ ಕುಮಾರ್ ಸೇರಿ ವಿವಿಧ ಇಲಾಖೆಗಳ  ಮುಖ್ಯಸ್ಥರು ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.