Tuesday, June 4, 2013

ಜೂನ್ 12 ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

ಮಂಗಳೂರು, ಜೂನ್. 04:-ಪ್ರತಿಯೊಂದು ಮಗುವಿಗೂ ಬದುಕುವ ಹಕ್ಕು, ರಕ್ಷಣೆ ಹಕ್ಕು ಹಾಗೂ ವಿಕಾಸ ಹೊಂದುವ ಹಕ್ಕಿದೆ. ಪ್ರತಿಯೊಂದು ಮಗುವು ತನ್ನ ಬಾಲ್ಯವನ್ನು ಶಾಲೆಯಲ್ಲಿ ಓದಿ ಬರೆದು ಬೆಳೆಯಲು ಅನುಕೂಲವಾಗುವಂತೆ ಸಂವಿಧಾನ, ಸರ್ಕಾರ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗಾಗಿಯೇ ಇರುವ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಸಕರ್ಾರೇತರ ಸಂಘ ಸಂಸ್ಥೆಗಳು ಕಾರ್ಯೋನ್ಮುಖವಾಗಿವೆ.
ಆದರೂ ಸಂಪೂರ್ಣ ಬಾಲಕಾರ್ಮಿಕ ಮುಕ್ತ ಸಮಾಜವೆಂದು ನಮ್ಮನ್ನು ನಾವು ಗುರುತಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ; ಸಾಕ್ಷರತೆ ಹಾಗೂ ಇತರೆ ವಿಷಯಗಳಲ್ಲಿ ಮುಂದುವರಿದಿರುವ ನಮ್ಮ ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ಮನೆ  ಕೆಲಸಕ್ಕೆ ಈಗಲೂ ಬಳಸಿಕೊಳ್ಳಲಾಗುತ್ತಿದೆ. ಈ ಮಕ್ಕಳು ವಲಸೆ ಬಂದ ಮಕ್ಕಳೇ ಇರಬಹುದು ಆದರೂ ಮಕ್ಕಳೇ ತಾನೇ ಎಂಬುದು ಪ್ರಜ್ಞಾ ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಹಿಲ್ಡಾ ರಾಯಪ್ಪನ್ ಅವರ ಪ್ರಶ್ನೆ.  ಹೊಟೇಲ್, ಅಂಗಡಿ ಮುಂಗಟ್ಟುಗಳಲ್ಲಿ ಮಕ್ಕಳನ್ನು ದುಡಿಸಿಕೊಳ್ಳಲು ಇಂದು ಇಲ್ಲಿನ ವಿದ್ಯಾವಂತರು ಹಿಂಜರಿಯುತ್ತಾರಾದರೂ ಮನೆಕೆಲಸಗಳಲ್ಲಿ ಮಕ್ಕಳನ್ನು ದುಡಿಸಿಕೊಳ್ಳುತ್ತಿರುವುದು ಈಗಲೂ ಪತ್ತೆಯಾಗುತ್ತಿದೆ. ಹಾಗಾಗಿ ಈ ನಿಟ್ಟಿನಲ್ಲಿ ಜಾಗೃತಿ ಮತ್ತು ಅಪರಾಧ ಮಾಡಿದವರಿಗೆ ಕಠಿಣ ಶಿಕ್ಷೆ ಎರಡೂ ಮುಖ್ಯ ಎಂದು ಅವರು ಹೇಳುತ್ತಾರೆ.
ಪ್ರತಿ ವರ್ಷದಂತೆ ಈ ಬಾರಿಯೂ ಜೂನ್ 12ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ. ಈ ಸಂಬಂಧ  ಜಿಲ್ಲಾಧಿಕಾರಿ ಎನ್ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಕರೆದ ಪೂರ್ವಭಾವಿ ಸಭೆಯಲ್ಲಿ ಹೀಲ್ಡಾ ರಾಯಪ್ಪನ್ ಅವರು ಮೇಲ್ಕಂಡಂತೆ ಅಭಿಪ್ರಾಯ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2012-13ನೇ ಸಾಲಿನಲ್ಲಿ ಒಟ್ಟು 5070 ದಾಳಿಗಳನ್ನು ಹಾಗೂ ಈ ಸಂಬಂಧ ತನಿಖೆಗಳನ್ನು ನಡೆಸಲಾಗಿದ್ದು, ಮೂರು ಬಾಲಕಾಮರ್ಿಕರನ್ನು ಪತ್ತೆ ಹಚ್ಚಲಾಗಿದೆ. ಇವರಲ್ಲಿ ಇಬ್ಬರು ಅಪಾಯಕಾರಿ ಹಾಗೂ ಒಂದು ಮಗು ಅಪಾಯಕಾರಿಯಲ್ಲದ ಉದ್ದಿಮೆಯಲ್ಲಿ ದುಡಿಯುತ್ತಿದ್ದರು. ಇದರಲ್ಲಿ ಒಂದು ಮಗುವನ್ನು ಪೋಷಕರಿಗೆ ಒಪ್ಪಿಸಲಾಗಿದೆ. ಇನ್ನೊಂದು ಮಗುವನ್ನು ಬಿಜೈ ಕಾಪಿಕ್ಕಾಡಿನಲ್ಲಿರುವ ಚಿಣ್ಣರ ತಂಗುಧಾಮಕ್ಕೆ ಸೇರಿಸಲಾಗಿದೆ. ಮತ್ತೊಂದು ಮಗುವನ್ನು ಪುನರ್ವಸತಿ  ಕಲ್ಪಿಸಿ ಶಾಲೆಗೆ ಸೇರಿಸುವ ಕಾರ್ಯವಾಗಿದೆ. 11 ಮಕ್ಕಳನ್ನು ಬಾಲಕಾರ್ಮಿಕರೆಂದು ಸಂಶಯದ ಮೇಲೆ ಪತ್ತೆ ಹಚ್ಚಿ ಪರಿಶೀಲಿಸಿದಾಗ ಎಲ್ಲ ಮಕ್ಕಳು 14 ವರ್ಷ ಮೇಲ್ಪಟ್ಟವರಾಗಿದ್ದು ಅವರನ್ನು ಹೆತ್ತವರಿಗೆ ಒಪ್ಪಿಸಲಾಗಿದೆ. 60 ಜನರ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಪ್ರಶ್ನೆಗೆ ಮಾಹಿತಿ ನೀಡಿದರು.                                 
ಈ ಸಂಬಂಧ ಕಾರ್ಮಿಕ ಇಲಾಖೆಯವರು ಜೂನ್ 12ರಂದು ಜ್ಯೋತಿ ವೃತ್ತದಿಂದ ಪುರಭವನದವರೆಗೆ ಜಾಥಾ, ಜನಜಾಗೃತಿ ಮೂಡಿಸಲು ಬೀದಿನಾಟಕ, ಮೈಮ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಪರ ಜಿಲ್ಲಾಧಿಕಾರಿ ಕೆ ಎ ದಯಾನಂದ ಮತ್ತು ಇತರ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.