Monday, July 8, 2013

ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮ: ಶೇಕಡಾ 100 ಸಾಧನೆಗೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು, ಜುಲೈ.08:- ಕನರ್ಾಟಕ ಸಕರ್ಾರದ  ಮಹತ್ವಾಕಾಂಕ್ಷಿ ಯೋಜನೆ 01 ರಿಂದ 10 ನೇ ತರಗತಿಯ ಎಲ್ಲಾ ಸರಕಾರಿ ಶಾಲಾ ಮಕ್ಕಳಿಗೆ ಕಡ್ಡಾಯ ಆರೋಗ್ಯ ತಪಾಸಣೆ ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮ ಕಳೆದ ವರ್ಷ 3 ಲಕ್ಷ ಮಕ್ಕಳಿಗೆ ದೊರಕಿದ್ದು, ಉಳಿದ 20 ಸಾವಿರ ಮಕ್ಕಳು ಈ ಯೋಜನೆಯ ಲಾಭ ಪಡೆದಿಲ್ಲ. ಆದ್ದರಿಂದ 2013-14ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಎಲ್ಲಾ ಸರಕಾರಿ ಶಾಲೆಗಳ ಮಕ್ಕಳ ಆರೋಗ್ಯ ತಪಾಸಣೆ ಮಾಡುವ ಮೂಲಕ ಶೇಕಡಾ 100 ರಷ್ಟು ಗುರಿ ಸಾಧಿಸುವಂತೆ ಆರೋಗ್ಯ ಇಲಾಖೆ ಹಾಗೂ ಶೈಕ್ಷಣಿಕ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎನ್.ಪ್ರಕಾಶ್ ಅವರು ಸೂಚಿಸಿದ್ದಾರೆ.
       ಅವರು ಈ ಬಗ್ಗೆ ಶನಿವಾರ (6-7-13) ತಮ್ಮ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸುವರ್ಣ ಆರೋಗ್ಯ ಚೈತನ್ಯ ಯೋಜನೆ ಸಂಪೂರ್ಣ ಉಚಿತ ಚಿಕಿತ್ಸೆಯಾಗಿದ್ದು, ಎಲ್ಲಾ ಮಕ್ಕಳಿಗೆ ಸೂಕ್ತ ಆರೋಗ್ಯ ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಯನ್ನು ಆಯ್ದ ಹೈಟೆಕ್  ಆಸ್ಪತ್ರೆಗಳ ಮೂಲಕ ದೊರಕಿಸಿಕೊಡುವ ಯೋಜನೆಯಾಗಿದೆ ಎಂದು ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ರುಕ್ಮಿಣಿ ಅವರು ತಿಳಿಸಿದರು.
ಈಗಾಗಲೇ ಎಲ್ಲಾ ತಾಲೂಕುಗಳಲ್ಲಿ  ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಹೆಚ್ಚುವರಿಯಾಗಿ ಇಬ್ಬರು ವೈದ್ಯರು
ನರ್ಸ್ ಗಳ ನೇಮಕ ವಾಗಿದ್ದು,ಎಲ್ಲಾ ಸರ್ಕಾರಿ ಶಾಲಾ ಸಿಬ್ಬಂದಿಗಳು ತಮ್ಮ ಶಾಲೆಯ ಮಕ್ಕಳನ್ನು ಆರೋಗ್ಯ ತಪಾಸಣೆಗೊಳಪಡಿಸಲು ಹಾಗೂ ಪ್ರತಿಯೊಬ್ಬ ವಿದ್ಯಾರ್ಥಿಗೂ ನೀಡಿರುವ ಸುವರ್ಣ ಆರೋಗ್ಯ ಕಾರ್ಡ್ ನಲ್ಲಿ ವಿವರಗಳನ್ನು ತಪ್ಪದೆ ನಮೂದಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಓ.ಆರ್.ಶ್ರೀರಂಗಪ್ಪ ಸಂಬಂಧಿಸಿದವರಿಗೆ ಸೂಚಿಸಿದರು.
ಹದಿಹರೆಯದ 10-19 ವಯೋಮಾನದ  ಎಲ್ಲಾ ಹೆಣ್ಣು ಮಕ್ಕಳಿಗೆ ರಕ್ತವೃದ್ಧಿಗಾಗಿ ಕಬ್ಬಿಣಾಂಶ ಮಾತ್ರೆಗಳನ್ನು ಶಾಲೆಗಳಿಗೆ ಸರಬರಾಜು ಮಾಡುವ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಗಳು ಶಿಕ್ಷಕರಿಗೆ ಸೂಚಿಸಿದ್ದಾರೆ.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ದಯಾನಂದ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.