Monday, July 1, 2013

ಕಾನೂನು ಸಾಕ್ಷರತಾ ರಥ ಸಂಚಾರಕ್ಕೆ ಚಾಲನೆ

ಮಂಗಳೂರು, ಜುಲೈ.01:- ಜನ ಸಾಮಾನ್ಯರಿಗೆ ಕಾನೂನು ಮಾಹಿತಿಯನ್ನು ಒದಗಿಸಿ ಅವರಲ್ಲಿ ಕಾನೂನಿನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದಿನಿಂದ ಮೂರು ದಿನಗಳ ಕಾಲ (1-7-13 ರಿಂದ 3-7-13) ಮಂಗಳೂರು ತಾಲೂಕಿನಲ್ಲಿ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯ ಅಭಿಯಾನವನ್ನು ಹಮ್ಮಿಕೊಂಡಿದ್ದು, ಕಾನೂನು ಸಾಕ್ಷರತಾ ರಥಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಚೌಡಾಪುರ್ಕರ್ ಅರುಣ್ ಅವರು ನ್ಯಾಯಾಲಯ ಆವರಣದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್.ಪ್ರಕಾಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್.ವಿಜಯಪ್ರಕಾಶ್, ವಕೀಲರ ಸಂಘದ ಅಧ್ಯಕ್ಷರಾದ ಪಿ.ಅಶೋಕ ಅರಿಗಾ, ಪ್ರಾದೇಶಿಕ ಸಾರಿಗೆ ಅಧಿಕಾರಿ  ಮಲ್ಲಿಕಾರ್ಜುನ ಮುಂತಾದವರು ಹಾಜರಿದ್ದರು.