
ಸಮಾಲೊಚನಾ ಸಭೆಯಲ್ಲಿ ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಅವರು, ರಾಜ್ಯದಲ್ಲೇ ಮೊದಲ ಬಾರಿಗೆ ಅಹೋರಾತ್ರಿ ಸಮ್ಮೇಳನ ನಡೆಯಲಿದ್ದು,ಇದರಲ್ಲಿ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚಿಂತನಾಗೋಷ್ಥಿ, ಆಹಾರೋತ್ಸವಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಮೇಯರ್ ರಜನಿ ದುಗ್ಗಣ್ಣ ಅವರು, ಸಾಹಿತ್ಯ ಸಮ್ಮೇಳನದ ಪ್ರತಿನಿಧಿ ಕೂಪನ್ ಗಳನ್ನು ಬಿಡುಗಡೆ ಗೊಳಿಸಿದರು. ಸಭೆಯಲ್ಲಿ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಗಣೇಶ್ ಅಮೀನ್ ಸಂಕಮಾರ್, ಮಂಗಳೂರು ಸಾಹಿತ್ಯ ಪರಿಷತ್ ಅಧ್ಯಕ್ಷ ಸರ್ವೋತ್ತಮ ಅಂಚನ್, ಕಾಲೇಜಿನ ಪ್ರಾಂಶುಪಾಲರಾದ ದೇವರಾಜ್ ಪಾಲ್ಗೊಂಡಿದ್ದರು. ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ವಿಜಯಲಕ್ಷ್ಮಿ ಶೆಟ್ಟಿ ಸ್ವಾಗತಿಸಿದರು.