
ಈ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಪಿ. ಶಿವಶಂಕರ್ ಅವರ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಪರೀಕ್ಷೆ ಬರೆಯಲು ಕೈಗೊಂಡ ಕ್ರಮಗಳ ಬಗ್ಗೆ ಸವಿವರವಾದ ಚರ್ಚೆ ನಡೆಯಿತು.ಮಂಗಳೂರಿನ ಕುಲಶೇಕರದ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆ, ಗಣಪತಿ ಪ.ಪೂ. ಕಾಲೇಜು ಹಂಪನಕಟ್ಟೆ, ಸರ್ಕಾರಿ ಪ.ಪೂ. ಕಾಲೇಜು ರಥಬೀದಿ, ಸಂತ ಜೆರೋಸಾ ಪ್ರೌಢಶಾಲೆ ಜಪ್ಪು, ಕಪಿತಾನಿಯೋ ಪ್ರೌಢಶಾಲೆ ಕಂಕನಾಡಿ, ಪಾಂಪೈ ಪ್ರೌಢಶಾಲೆ ಊರ್ವದಲ್ಲಿರುವ ಪರೀಕ್ಷಾ ಕೇಂದ್ರಗಳನ್ನು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ.

ಪ್ರಶ್ನೆ ಪತ್ರಿಕೆ ಅವಲೋಕನೆಗೆ 15 ನಿಮಿಷ: ಪರೀಕ್ಷೆಯು ಬೆಳಗ್ಗೆ 10.30ಕ್ಕೆ ಆರಂಭವಾಗಲಿದ್ದು, 10.30ರಿಂದ 10.45ರವರೆಗೆ ವಿದ್ಯಾರ್ಥಿಗಳಿಗೆ ಪ್ರಶ್ನೋತ್ತರ ಪತ್ರಿಕೆಯಲ್ಲಿನ ಪ್ರಶ್ನೆಗಳನ್ನು ಅವಲೋಕಿಸಲು ಅವಕಾಶ ಮಾಡಿಕೊಡಲಾಗಿದೆ. ಸರ್ಕಾರ ಈ ಸಂಬಂಧ ಆದೇಶವನ್ನು ಹೊರಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಆದೇಶ ಪಾಲನೆ ಕುರಿತು ಮಾಹಿತಿ ನೀಡುವಂತೆ ಸಭೆಯಲ್ಲಿ ಸೂಚನೆಯನ್ನು ನೀಡಲಾಯಿತು. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಸೆಕ್ಷನ್ 144ರ ಪ್ರಕಾರ ಘೋಷಿಸಿ ಅಗತ್ಯ ರಕ್ಷಣೆಯ ಆದೇಶವನ್ನು ಜಿಲ್ಲಾಧಿಕಾರಿಗಳು ಹೊರಡಿಸಿದ್ದಾರೆ. 1.4.10 ರಿಂದ 9.4.10ರ ತನಕ ಜಿಲ್ಲೆಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸಲಾಗುವ ಆಯಾ ಕೇಂದ್ರಗಳ ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.