
ಅವರಿಂದು ತಾಲೂಕು ಪಂಚಾಯತ್ ಮಂಗಳೂರು, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ತಾಲೂಕು ಪಂಚಾಯತ್ ನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸ್ ಅವರ 95 ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ರಾಜಕೀಯ ಜೀವನವಿರುವುದು ಸಮಾಜ ಸೇವೆ ಮಾಡಲು ಎಂಬುದನ್ನು ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸ್ ಅವರು ತೋರಿಸಿ ಕೊಟ್ಟಿದ್ದಾರೆ. ತಮ್ಮ 30 ವರ್ಷದ ರಾಜಕೀಯ ಜೀವನಕ್ಕೆ ಸ್ಫೂರ್ತಿ ಅವರು ಎಂದ ಅಧ್ಯಕ್ಷರು, ಭೂ ಸುಧಾರಣೆ ಕಾಯಿದೆ ಜಾರಿಗೆ ತಂದು ಉಳುವ ವನನ್ನು ಭೂಮಿಗೆ ಒಡೆಯನಾಗಿ ಮಾಡಿದ ಶ್ರೇಯ ಅವರಿಗೆ ಸಲ್ಲುತ್ತದೆ ಎಂದರು. ನಮ್ಮ ರಾಜ್ಯ ಈ ನಿಟ್ಟಿನಲ್ಲಿ ದೇಶಕ್ಕೆ ಮಾದರಿ ಯಾಗಿದೆ ಎಂದ ಅವರು, ಜನಪರ, ಹಿಂದುಳಿದ ವರ್ಗದ ಅಭಿವೃದ್ಧಿಗೆ ಅರಸ್ ಅವರು ಹಾಕಿದ ಯೋಜನೆಗಳೇ ಇಂದಿನ ಮುಖ್ಯ ಮಂತ್ರಿಗಳಿಗೂ ಮಾದರಿ. ವೃದ್ಧಾಪ್ಯ ವೇತನ, ವಿಧವಾ ವೇತನದಂತಹ ಕಾರ್ಯಕ್ರಮಗಳನ್ನು ನೀಡಿದ ಅರಸ್ ಅವರು, ಬಿಸಿಎಂ ಹಾಸ್ಟೆಲ್ ಗಳ ಮುಖಾಂತರ ಬಡ ಹಾಗೂ ಹಿಂದುಳಿದ ವರ್ಗಗಳ ಮಕ್ಕಳನ್ನು ಮುಖ್ಯವಾಹಿನಿಗೆ ಸೇರಿಸಲು ನೀಡಿದ ಕೊಡುಗೆ ಅನನ್ಯ ಎಂದರು. ಇಂದು ರಾಜ್ಯ ಸರ್ಕಾರ ಇದೇ ಮಾದರಿಯನ್ನು ಮುಂದಿಟ್ಟು ಹಲವು ಯೋಜನೆಗಳನ್ನು ರೂಪಿಸಿದೆ. ಸರ್ವ ಶಿಕ್ಷಣ ಅಭಿಯಾನದಡಿ ಜಿಲ್ಲೆಗೆ ಪ್ರಸಕ್ತ ಸಾಲಿನಲ್ಲಿ 30 ಕೋಟಿ ರೂ. ಬಿಡುಗಡೆಯಾಗಿದೆ. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ನಿಗಮದಲ್ಲೂ ಸಾಕಷ್ಟು ಅನುದಾನವಿದ್ದು, ಮಕ್ಕಳಿಗೆ ಸೌಲಭ್ಯ ದೊರಕಿಸಲು ಶಿಕ್ಷಕರು ಆಸಕ್ತಿ ವಹಿಸಬೇಕು ಎಂದರು.
ಸಮಾರಂಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ರಾಮಚಂದ್ರಕುಂಪಲ, ಉಪಾಧ್ಯಕ್ಷರಾದ ಶ್ರೀಯಾಳ ಜೆ. ಹೆಗ್ಡೆ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಪೂಜಾರಿ, ಮಾಜಿ ಅಧ್ಯಕ್ಷ ಗೋಕುಲ್ ದಾಸ್ ಶೆಟ್ಟಿ, ಸದಸ್ಯ ಮಹಮದ್ ಸಿರಾಜ್, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ ಜಿಲ್ಲಾ ಅಧಿಕಾರಿ ಎಸ್. ಎಸ್. ಕಾಳೆ, ಉಪಸ್ಥಿತರಿದ್ದರು.ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ವಿಶ್ವನಾಥ್ ಪೂಜಾರಿ ಸ್ವಾಗತಿಸಿದರು. ಹೇಮಂತ ಕಾರ್ಯಕ್ರಮ ನಿರ್ವಹಿಸಿದರು.