ಮಂಗಳೂರು,ಸೆಪ್ಟೆಂಬರ್.12:ಜನನ ಮರಣ ನೋಂದಣಿಯನ್ನು ಅಕ್ಟೋಬರ್ ಒಂದು 2011 ರಿಂದ ಮಂಗಳೂರು ನಗರದ ಲೇಡಿಗೋಷನ್ ಆಸ್ಪತ್ರೆ,ಮೂಲ್ಕಿ ಮೂಡಬಿದ್ರೆ, ಸಮುದಾಯ ಆರೋಗ್ಯ ಕೇಂದ್ರ,ಬಂಟ್ವಾಳ,ಪುತ್ತೂರು,ಬೆಳ್ತಂಗಡಿ,ಸುಳ್ಯ ತಾಲೂಕು ಆಸ್ಪತ್ರೆಗಳಲ್ಲಿ ಮಾಡಲಾಗುವುದು ಹಾಗೂ ಪ್ರಮಾಣ ಪತ್ರವನ್ನು ನೀಡಲಾಗುವುದೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಡಾ. ಎನ್.ಎಸ್.ಚನ್ನಪ್ಪ ಗೌಡ ತಿಳಿಸಿದರು.
ಅವರು ಇಂದು ನಡೆದ ಜನನ ಮರಣ ನೋಂದಣಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಇನ್ನು ಮುಂದಿನ ದಿನಗಳಲ್ಲಿ ಎಲ್ಲಾ ಆರೋಗ್ಯಾಧಿಕಾರಿಗಳಿಗೆ ಈ ಬಗ್ಗೆ ತರಬೇತಿ ನೀಡಿ ಯೋಜನೆಯನ್ನು ಸಮರ್ಪಕವಾಗಿ ಕಾರ್ಯಗತಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀ ಓ.ರಂಗಪ್ಪ ಸಭೆಗೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಅಂಕೆ ಸಂಖ್ಯಾಧಿಕಾರಿಗಳು, ಆರೋಗ್ಯ ಅಧಿಕಾರಿಗಳು,ತಹಶೀಲ್ದಾರರು ಹಾಗೂ ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು.