ಮಂಗಳೂರು,ನವೆಂಬರ್.11 :ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಡಿಯಲ್ಲಿ 13ನೇ ಸ್ಥಾನದಿಂದ 2ನೇ ಸ್ಥಾನಕ್ಕೆ ಏರಿದ್ದು, ಪ್ರಥಮ ಸ್ಥಾನ ಗಳಿಸಲು ಎಲ್ಲಾ ಅಧಿಕಾರಿಗಳು ಶ್ರಮ ವಹಿಸಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶೈಲಜಾ ಭಟ್ ಹೇಳಿದರು.ಅವರು ಇಂದು ಜಿಲ್ಲಾ ಪಂಚಾ ಯತ್ ಸಭಾಂ ಗಣ ದಲ್ಲಿ ನಡೆದ ಕರ್ನಾ ಟಕ ಅಭಿ ವೃದ್ಧಿ ಕಾರ್ಯ ಕ್ರಮ ಗಳ ಪ್ರಗತಿ ಪರಿ ಶೀಲನಾ ಸಭೆ ಯಲ್ಲಿ ಮಾತ ನಾಡುತ್ತಾ, ಈ ಮಾಹಿತಿ ಯನ್ನು ಸಭೆಗೆ ನೀಡಿ ದರು.ತಾಲೂಕು ಪಂಚಾ ಯತ್ ಕಾರ್ಯ ನಿರ್ವ ಹಣಾ ಧಿಕಾ ರಿಗಳು ಕೆಳ ಮಟ್ಟದ ಅಧಿಕಾ ರಿಗ ಳಿಗೆ ಕೇವಲ ಸೂಚನೆಗಳನ್ನು ನೀಡದೆ ಖುದ್ದಾಗಿ ಗ್ರಾಮ ಪಂಚಾಯತ್ ಮಟ್ಟಕ್ಕೆ ತೆರಳಿ, ಸೂಕ್ತ ಮಾರ್ಗದರ್ಶನ ನೀಡಬೇಕೆಂದ ಅವರು, ನಿಗಧಿತ ಗುರಿ ಸಾಧಿಸುವಲ್ಲಿ ಇತರ ಜಿಲ್ಲೆಗಳಿಗೆ ಮಾದರಿಯಾಗಬೇಕೆಂದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಡಾ.ಕೆ.ಎನ್.ವಿಜಯಪ್ರಕಾಶ್ ಅಧಿಕಾರ ವಿಕೇಂದ್ರಿಕರಣಕ್ಕೆ ತಮ್ಮ ಕಚೇರಿಯು ವಿನೂತನ ಕ್ರಮಗಳನ್ನು ಕೈಗೊಂಡಿದ್ದು, ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಸಹಿ ಹಾಕುವ ಜವಾಬ್ದಾರಿಯನ್ನು ತಮ್ಮ ಅಧೀನ ಅಧಿಕಾರಿಗಳಿಗೆ ಹಂಚಿಕೆ ಮಾಡಿರುವುದಾಗಿ ತಿಳಿಸಿದರು.
ಸಾರ್ವಜನಿಕ ಕುಂದುಕೊರತೆ ಬಗ್ಗೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ತುರ್ತು ಹಾಗೂ ಸೂಕ್ತ ಕ್ರಮ ವಹಿಸಿ ಸಾರ್ವಜನಿಕ ದೂರುಗಳಿಗೆ ಸ್ಪಂದಿಸಲು ಸೂಚಿಸಿದರು.ಪ್ರಮುಖವಾಗಿ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗವು ಕಾಲಮಾನಕ್ಕೆ ತಕ್ಕಂತೆ ನಿಗಧಿತ ಅವಧಿಯೊಳಗೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸೂಚಿಸಿದರು. ಜಿಲ್ಲೆಯಲ್ಲಿ 13175 ವಿಕಲಚೇತನರನ್ನು ಗುರುತಿಸಲಾಗಿದ್ದು ಸರ್ಕಾರೇತರ ಸಂಸ್ಥೆಗಳ ನೆರವಿನೊಂದಿಗೆ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಮುಖ್ಯ ಕಾರ್ಯ ನಿವರ್ಾಹಕ ಅಧಿಕಾರಿಯವರು ಜಿಲ್ಲೆಯಲ್ಲಿ ಸಮನ್ವಯ ಅಧಿಕಾರಿಗಳ ಜೊತೆಗೆ 605 ಅಂಗವಿಕಲ ಮಕ್ಕಳಿಗೆ ಮನೆಯಾಧಾರಿತ ವಿದ್ಯಾಭ್ಯಾಸ ನೀಡಲು ಮಾರ್ಗದರ್ಶನ ನೀಡಿದರು. ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಆಶ್ರಯ, ಅಂಬೇಡ್ಕರ್ ವಸತಿ ಯೋಜನೆಯ ಅಭಿವೃದ್ದಿಯಲ್ಲಿ ನಿರೀಕ್ಷಿತ ಸಾಧನೆ ಆಗಿಲ್ಲ ಎಂದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರು ಸಂಬಂಧಪಟ್ಟ ಇಲಾಖಾಧಿಕಾರಿಗಳ ಪ್ರತ್ಯೇಕ ಸಭೆ ಕರೆಯುವುದಾಗಿ ತಿಳಿಸಿದರು.
ಮಂಗಳೂರು ಮಹಾನಗರಪಾಲಿಕೆ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭಿವೃದ್ಧಿ ಆಗದಿದ್ದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು. ಕೆಡಿಪಿ ಸಭೆಯ ಕೊನೆಯಲ್ಲಿ ಚೀನಾದ ಶಾಂಘೈಯಲ್ಲಿ ಸ್ಕೇಟಿಂಗ್ನಲ್ಲಿ ಚಿನ್ನದ ಪದಕ ಪಡೆದ ಧನ್ಯರಾವ್ ಹಾಗೂ ಬೆಳ್ಳಿ ಕಂಚು ಪದಕ ಪಡೆದ ಧನರಾಜ್ ಅವರನ್ನು ಜಿಲ್ಲಾ ಪಂಚಾಯತ್ ವತಿಯಿಂದ ಹಾರ ಪ್ರಶಸ್ತಿ ಪತ್ರ ಹಾಗೂ 10 ಸಾವಿರ ನೀಡಿ ಸನ್ಮಾನಿಸಲಾಯಿತು.ಯೋಜನಾ ನಿರ್ದೇಶಕಿ ಶ್ರೀಮತಿ ಸೀತಮ್ಮ ,ಉಪಕಾರ್ಯದರ್ಶೀಶಿವರಾಮೇ ಗೌಡ ,ಮುಖ್ಯ ಯೋಜನಾಧಿಕಾರಿ ನಜೀರ್,ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಜನಾರ್ಧನ ,ಕೃಷಿ ಮತ್ತು ಕೈಗಾರಿಕೆ ಸಮಿತಿ ಅಧ್ಯಕ್ಷರಾದ ನವೀನ್ ಕುಮಾರ್ ಮೇನಾಲ,ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಈಶ್ವರ ಕಟೀಲ್ ಉಪಸ್ಥಿತರಿದ್ದರು.