ಕಾರ್ಯಕ್ರಮಗಳ ವೀಕ್ಷಣೆಗೆ ಆಗಮಿಸಲು ಅನುಕೂಲವಾಗುವಂತೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ನೀಡಲು ನಿರ್ಧರಿಸಲಾಗಿದೆ. ಸೋಮವಾರ ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ.ಪಾಲೆಮಾರ್ ಅಧ್ಯಕ್ಷತೆಯಲ್ಲಿ ನಡೆದ ಜನ ಪ್ರತಿನಿಧಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳ ಲಾಯಿತು. ಶಾಲೆಗಳಿಗೆ ರಜಾ ಸೌಲಭ್ಯ ಇಲ್ಲ. ಆದರೆ ಕಾರ್ಯಕ್ರಮ ವೀಕ್ಷಣೆಗೆ ಶಾಲೆಗಳಿಗೆ ಅವಕಾಶ ಮಾಡಿ ಕೊಡ ಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್.ಎಸ್.ಚನ್ನಪ್ಪ ಗೌಡ ಸಭೆಗೆ ಸ್ಪಷ್ಟಪಡಿಸಿದರು.

ಯುವ ಜನೋತ್ಸವದ ವಿಷಯ ಗ್ರಾಮಾಂತರ ಪ್ರದೇಶ ಗಳಿಗೆ ತಲುಪಲು ಗ್ರಾ.ಪಂ. ಮಟ್ಟದಲ್ಲಿ ಪ್ರಚಾರ ಹಮ್ಮಿ ಕೊಳ್ಳಲಾಗುವುದು. ಅದಕ್ಕೆ ಬೇಕಾಗುವ ಬೆಂಬಲವನ್ನು ಉತ್ಸವ ಸಮಿತಿ ಗ್ರಾಮ ಪಂಚಾಯತ್ಗಳಿಗೆ ನೀಡಲಿದೆ ಎಂದು ಜಿಲ್ಲಾಧಿಕಾರಿ ನುಡಿದರು.
ಜಿಲ್ಲೆಯ ವಿವಿಧ ಕಲಾ ತಂಡಗಳು, ಪ್ರಶಸ್ತಿ ವಿಜೇತ ಯುವ ಸಂಘಟನೆಗಳು ಮತ್ತು ಯುವಶಕ್ತಿಯನ್ನು ಯುವ ಜನೋತ್ಸವದ ಯಶಸ್ವಿಗೆ ಬಳಸಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಮಂತ್ರಿ ಕೃಷ್ಣ ಜೆ.ಪಾಲೆಮಾರ್ ಅವರು, ನಗರದ ರಾಜಬೀದಿಗಳು, ಕಟ್ಟಡಗಳು, ಪ್ರೇಕ್ಷಣೀಯ ಸ್ಥಳಗಳು ಮತ್ತು ಆರಾಧನಾ ಕ್ಷೇತ್ರಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸು ವಂತೆಯೂ ಸಚಿವರು ವಿನಂತಿಸಿದರು. ಸಭೆಯಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಎನ್.ಯೋಗೀಶ್ ಭಟ್, ಶಾಸಕರಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ಜಿ.ಪಂ. ಅಧ್ಯಕ್ಷೆ ಶೈಲಜಾ ಕೆ.ಟಿ.ಭಟ್, ಉಪಾಧ್ಯಕ್ಷೆ ಧನಲಕ್ಷ್ಮೀ ಜನಾರ್ದನ್, ಮೇಯರ್ ಪ್ರವೀಣ್ ಅಂಚನ್, ಮೂಡಾ ಅಧ್ಯಕ್ಷ ಎಸ್.ರಮೇಶ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್. ವಿಜಯಪ್ರಕಾಶ್ ಸಭೆಯಲ್ಲಿ ಉಪಸ್ಥಿತರಿದ್ದರು.