
ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಧಿಯಿಂದ 101 ಅಂಗನವಾಡಿ ಕಟ್ಟಡಗಳ ಕಾಮಗಾರಿ ಕೈಗೊಂಡಿದ್ದು ಇದರಲ್ಲಿ 28 ಕಟ್ಟಡಗಳ ಕಾಮಗಾರಿ ಪೂರ್ಣಗೊಂಡಿದ್ದರೆ 61 ಕಟ್ಟಡಗಳ ಕಾಮಗಾರಿ ಆರಂಭಿಸಲಾಗಿದೆ. ಇನ್ನು 12 ಕಟ್ಟಡಗಳ ಕಾಮಗಾರಿ ಇನ್ನಷ್ಟೆ ಆರಂಭಿಸಬೇಕಿದೆ ಎಂಬ ಮಾಹಿತಿಯನ್ನು ಉಪನಿರ್ದೇಶಕರು,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅವರು ಸಭೆಗೆ ತಿಳಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜು ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸುವಂತೆ ಹಾಗೂ ಯುವ ಗ್ರಾಮದಲ್ಲೂ ಕುಡಿಯುವ ನೀರನ ಸಮಸ್ಯೆ ತಲೆದೋರದಂತೆ ಸೂಕ್ತ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ನವೆಂಬರ್ ಅಂತ್ಯದ ವರೆಗೆ 19 ಕೊಳವೆ ಬಾವಿಗಳನ್ನು ಕೊರೆಯಲಾಗಿದೆ. 92 ನಳ್ಳಿನೀರು ಸರಬರಾಜು ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ.ಇದೇ ಅವಧಿಯಲ್ಲಿ 22 ಕಿರು ನೀರು ಸರಬರಾಜು ಯೋಜನೆಗಳುಪೂರ್ಣಗೊಂಡಿವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.