
ಅವರು ಇಂದು ಜಿಲ್ಲಾಧಿ ಕಾರಿಗಳ ಕಚೇರಿಯಲ್ಲಿ ಈ ಸಂಬಂಧ ನಡೆದ ಸಂಸದರ ಸ್ಥಳೀಯ ಪ್ರದೇಶಾ ಭಿವೃದ್ಧಿ ಯೋಜನೆಯಡಿ ಅನುಷ್ಠಾ ನಗೊಳಿಸ ಲಾದ ಕಾಮ ಗಾರಿಗಳ ಪ್ರಗತಿ ಪರಿಶೀಲನೆ ಮಾಡಿ ಮಾತ ನಾಡಿದರು.ಸಂಸದರ ನಿಧಿಯಿಂದ ಕಾಮಗಾರಿಗಳಿಗೆ ಮಂಜೂರಾತಿ ಪಡೆದು ಕಾಮಗಾರಿ ಆರಂಭಿಸದೆ ಕಾಲಹರಣ ಮಾಡುವ ಸಂಘ ಸಂಸ್ಥೆಗಳಿಗೆ ಮೂರು ನೋಟೀಸ್ ಜಾರಿ ಮಾಡಿ ಉತ್ತರ ಬಾರದಿದ್ದಲ್ಲಿ ನಂತರ ಏಕಪಕ್ಷೀಯವಾಗಿ ನಿಯಮಾವಳಿಯಂತೆ ರದ್ದು ಪಡಿಸಲು ಅವಕಾಶವಿರುವುದರಿಂದ ಕೂಡಲೇ ಕ್ರಮ ಕೈಗೊಂಡು ಬೇರೆಯವರಿಗೆ ಮಂಜೂರಾತಿ ಮಾಡುವಂತೆ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆ, ನಿರ್ಮಿತಿ ಕೇಂದ್ರ,ಲೋಕೋಪಯೋಗಿ ಇಲಾಖೆಯವರು ಸಂಸದ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಕಾಮಗಾರಿಗಳ ಅನುಷ್ಠಾನಗೊಳಿಸಿ ಸಂಬಂಧಿಸಿದ ಬಿಲ್ಲುಗಳನ್ನು ಹಣ ಬಳಕೆ ದೃಢೀಕರಣದೊಂದಿಗೆ ಕೂಡಲೇ ಸಲ್ಲಿಸಲು ಅವರು ಸೂಚಿಸಿದ್ದಾರೆ. ಬಾಕಿ ಇರುವ ಕಾಮಗಾರಿಗಳನ್ನು ಮಾರ್ಚ್ 15 ರೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಗಡವು ವಿಧಿಸಿದ್ದಾರೆ.
ಸಭೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಗೋಪಾಲ್ ನಾಯಕ್ ಮುಂತಾದವರು ಉಪಸ್ಥಿತರಿದ್ದರು.