ಸಮಾರಂಭದಲ್ಲಿ ಮುಖ್ಯ ಉಪನ್ಯಾಸ ನೀಡಿದ ಗೋಕರ್ಣನಾಥೇಶ್ವರ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ ನರಸಿಂಹ ಮೂರ್ತಿ ಅವರು, ಶ್ರೇಷ್ಠರ ಮಾನವರ ಜಯಂತಿಗಳಂದು ಸಾರ್ವಜನಿಕ ರಜೆ ಘೋಷಿಸದೆ ಅವರ ಬಗ್ಗೆ ತಿಳಿಯುವ ಮಾಹಿತಿ ನೀಡುವ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು; ಕಾಯಕವೇ ಕೈಲಾಸವೆಂದ ಬಸವಣ್ಣನ ಜಯಂತಿಯಂದು ಕಾಯಕದ ಬಗ್ಗೆ ಯುವ ಜನಾಂಗಕ್ಕೆ ಮಾಹಿತಿ ನೀಡಿ, ಪ್ರೇರಪರಣೆ ನೀಡಿದರೆ ಅದೇ ನಾವು ಅವರಿಗೆ ಸಲ್ಲಿಸುವ ವಿಶೇಷ ನಮನ ಎಂದರು.
ಸಭಾ ಕಾರ್ಯಕ್ರಮದ ನಡುವೆ ವಚನಗಳನ್ನು ನೃತ್ಯದ ಮೂಲಕ ಪ್ರಸ್ತುತ ಪಡಿಸಲಾಯಿತು. ಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಆಶಿರ್ವಚನ ನೀಡಿದರು. ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಡಾ ಎಸ್ ಬಿ ಯಲಬುರ್ಗಿ, ಶಾರದ ಮಲ್ಲಪ್ಪ, ಶೋಭಾ ಮಲ್ಲಿಕಾರ್ಜುನ ಅಂಗಡಿ ಅವರು ವೇದಿಕೆಯಲ್ಲಿದ್ದರು. ಮಹಾನಗರಪಾಲಿಕೆ ಆಯುಕ್ತ ಹರೀಶ್ ಕುಮಾರ್, ಜಿ.ಪಂ. ಕಾರ್ಯದರ್ಶಿ ಶಿವರಾಮೇಗೌಡ ಉಪಸ್ಥಿತರಿದ್ದರು. ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಮಂಗಳಾ ವೆಂ ನಾಯಕ್ ಅತಿಥಿಗಳನ್ನು ಸ್ವಾಗತಿಸಿದರು.