Wednesday, July 4, 2012

ಗ್ರಾಮಪಂಚಾಯಿತಿಗಳಿಗೆ ನೀರು ಕೊಡಲು ಕೋರಿಕೆ

ಮಂಗಳೂರು,ಜುಲೈ.04: ಕೆ ಐಎಡಿಬಿ ಯವರು ಕೈಗಾರಿಕಾ ಪ್ರದೇಶಗಳಿಗೆ ನೀರು ನೀಡುವ ಸಂದರ್ಭದಲ್ಲಿ ಈ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಡಿ ಬರುವ ಜನಸಾಮಾನ್ಯರಿಗೆ ತೊಂದರೆಯಾಗದಂತೆ ನೀರು ಪೂರೈಸಬೇಕೆಂದು ಮಂಗಳೂರು ಕ್ಷೇತ್ರದ ಶಾಸಕ ಯು ಟಿ ಖಾದರ್ ಅವರು ಜಿಲ್ಲಾಧಿಕಾರಿಗಳಲ್ಲಿ ಹೇಳಿದರು.
ಗ್ರಾಮಪಂಚಾಯಿತಿಗಳ ಮೂಲಕ ನೀರು ಪೂರೈಕೆ ಸಂದರ್ಭದಲ್ಲಿ ಸ್ಥಳೀಯರ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿ ಯೋಜನೆ ರೂಪಿಸಿ ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಹೊಸ ಕೈಗಾರಿಕಾಭಿವೃದ್ಧಿ ಪ್ರದೇಶಕ್ಕೆ ಪ್ರತ್ಯೇಕ ನೀರಿನ ವ್ಯವಸ್ಥೆ ಮಾಡಲು ಕೆಐಎಡಿಬಿ ನಿರ್ದೇಶಕರಿಗೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ಸಭೆಯಲ್ಲಿ ಕೆಐಎಡಿಬಿ ಅಧಿಕಾರಿಗಳು ಉಪಸ್ಥಿತರಿದ್ದರು.