ಘನತ್ಯಾಜ್ಯ ವಿಲೇವಾರಿಗೆ ಸೂಕ್ತ ಕ್ರಮ ಮತ್ತು ದಿನಕೂಲಿ ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು ಮತ್ತು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ತುಂಬೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕಿಂಡಿ ಅಣೆಕಟ್ಟನ್ನು ವರ್ಷದೊಳಗೆ ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಒದಗಿಸುವಂತೆ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಪಾಲಿಕೆ ಸದಸ್ಯ ಶಶಿಧರ ಹೆಗ್ಟೆ ಅವರು ಮೇಯರ್ ಗುಲ್ಜಾರ್ ಭಾನು ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಮನವಿಗೆ ಮುಖ್ಯಮಂತ್ರಿ ಸಕಾರಾತ್ಮವಾಗಿ ಸ್ಪಂದಿಸುವ ಭರವಸೆ ನೀಡಿದರು.
ನಗರಾಭಿವೃದ್ದಿ ಮತ್ತು ಕಾನೂನು ಸಚಿವರಾದ ಸುರೇಶ್ ಕುಮಾರ್ ಅವರು ಮಾತನಾಡಿ ಈ ನೂತನ ಸಭಾಂಗಣಲ್ಲಿ ನಡೆಯುವ ಕಲಾಪಗಳು, ನಿರ್ಣಯಗಳು ಜನಹಿತವಾಗಲಿ ಮತ್ತು ಇತರರಿಗೆ ಮಾದರಿ ಯಾಗಲಿ ಎಂದು ಶುಭ ಹಾರೈಸಿದರು.
ಪಾಲಿಕೆ ಸದಸ್ಯ ಶಂಕರ್ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರೇಮಾನಂದ ಶೆಟ್ಟಿ ಸ್ವಾಗತಿಸಿದರು. ಮನಪಾ ಜಂಟಿ ಆಯುಕ್ತ ಶ್ರೀಕಾಂತ್ ರಾವ್ ವಂದಿಸಿದರು.