ಮಂಗಳೂರು, ನವೆಂಬರ್.16 : ಡಿಸೆಂಬರ್ ಒಂದರಂದು ಕನಕ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ಜಿಲ್ಲಾಡಳಿತ ಮತ್ತು ಸಂಘಟನೆ ಸೇರಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ನವೆಂಬರ್ 15ರಂದು ನಡೆಸಲಾಯಿತು.
ಕಳೆದ ಬಾರಿಯಂತೆ ಆಕರ್ಷಕವಾಗಿ ಹಾಗೂ ಅರ್ಥಪೂರ್ಣವಾಗಿ ಕಾರ್ಯಕ್ರಮ ನಡೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇತೃತ್ವದಲ್ಲಿ ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಮೆರವಣಿಗೆ ನಡೆಸಲು, ಕಲಾತಂಡ, ಉಪನ್ಯಾಸ ನೀಡಲು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರೂಪಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀಮತಿ ಮಂಗಳಾ ನಾಯಕ್, ಅಪರ ಜಿಲ್ಲಾಧಿಕಾರಿ ದಯಾನಂದ ಕೆ. ಎ, ಮಹಾ ನಗರ ಪಾಲಿಕೆ ಕಂದಾಯ ಅಧಿಕಾರಿ ಮೇಘನಾ, ತಹಸೀಲ್ದಾರ್ ರವಿಚಂದ್ರ ನಾಯಕ್ ಮತ್ತು ಸಂಘಟನೆಯ ಪ್ರಮುಖರು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡರು.