Wednesday, December 19, 2012

ಎಲ್ಲಾ ಮಕ್ಕಳಿಗೂ ಚುಚ್ಚು ಮದ್ದು ನೀಡಲು ಸಲಹೆ : ಡಾ. ಹೇಮಲತಾ

ಮಂಗಳೂರು, ಡಿಸೆಂಬರ್.19:  ತಾಯಿ ಮಗುವಿನ ಮರಣ ಸಂಖ್ಯೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಜನನಿ ಸುರಕ್ಷಾ ಯೋಜನೆ ಹಾಗು ಜನನಿ ಶಿಶು ಸುರಕ್ಷಾ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಈ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದುಕೊಂಡು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿ,  ಡಾ. ಹೇಮಲತಾ ತಿಳಿಸಿದರು.
 ಭಾರತ್ ನಿರ್ಮಾಣ್ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಾಗಾರದಲ್ಲಿ ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿ,  ಡಾ. ಹೇಮಲತಾ ಅವರು ಮಾತನಾಡಿದರು.
ಭಾರತ ಸರ್ಕಾರದ ವಾರ್ತಾ ಇಲಾಖೆ ಏರ್ಪಡಿಸಿದ್ದ  "ಭಾರತ ನಿರ್ಮಾಣ" ಸಾರ್ವಜನಿಕ ಮಾಹಿತಿ ಆಂದೋಲನ ಅಂಗವಾಗಿ ನಡೆದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕುರಿತು ನಡೆದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಸಿ ಮಾತಡುತ್ತಿದ್ದರು.
 ಸಧೃಡ ಜನಾಂಗವನ್ನು ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವುಗಳ ಸದುಪಯೋಗ ಪಡೆಸಿಕೊಂಡಾಗ ಮಾತ್ರ ಈ ಯೋಜನೆಗಳು ಸಾರ್ಥಕವಾಗುತ್ತವೆ ಎಂದು ಹೇಳಿದರು.ಹುಟ್ಟುವ  ಎಲ್ಲಾ ಮಕ್ಕಳಿಗೂ ಸರಿಯಾದ ಸಮಯಕ್ಕೆ ಚುಚ್ಚು ಮದ್ದುಗಳನ್ನು ನೀಡುವುದರಿಂದ ಅವರನ್ನು ಸಾಂಕ್ರಾಮಿಕ ರೋಗಗಳಿಂದ ರಕ್ಷಿಸಬಹುದು ಎಂದು ಅವರು ಕಿವಿಮಾತು ಹೇಳಿದರು.