ಮಂಗಳೂರು, ಜನವರಿ.11:-ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗಣರಾಜ್ಯೋತ್ಸವವನ್ನು
ಅದ್ದೂರಿಯಾಗಿ ಆಚರಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ
ಜಿಲ್ಲಾ ಸಮಿತಿ ಅಧ್ಯಕ್ಷರಾದ ಎನ್.ಪ್ರಕಾಶ ಅವರು ತಿಳಿಸಿದ್ದಾರೆ.
ಅವರು ನಿನ್ನೆ ಗುರುವಾರ ತಮ್ಮ ಕಚೇರಿಯಲ್ಲಿ ಈ ಬಗ್ಗೆ ನಡೆದ ಪೂರ್ವಭಾವೀ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂದು ಬೆಳಿಗ್ಗೆ 9.00 ಗಂಟೆಗೆ ನೆಹರೂ ಮೈದಾನದಲ್ಲಿ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಸಿ.ಟಿ ರವಿಯವರಿಂದ ಧ್ವಜಾರೋಹಣ ನೆರವೇರಿಸಿ ನಂತರ ಸಚಿವರು ವಂದನೆ ಸ್ವೀಕರಿಸಲಿರುವರು. ನಂತರ ವಿವಿಧ ರಂಗಗಳಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಸನ್ಮಾನಿಸುವರು. ಸುಮಾರು 5000 ಶಾಲಾ ಮಕ್ಕಳಿಂದ ಸಮೂಹ ದೇಶಭಕ್ತಿ ಗಾಯನ ಹಾಗೂ ನೃತ್ಯ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಅಂದು ಮಧ್ಯಾಹ್ನ ಪುರಭವನದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಬಹು ಭಾಷಾ ಕವಿಗೋಷ್ಠಿಯನ್ನು ಆಯೋಜಿಸಲು ಅಧ್ಯಕ್ಷರು ಸೂಚಿಸಿದರು.ನಗರದ ಎಲ್ಲಾ ಸರಕಾರಿ ಹಾಗೂ ಖಾಸಗಿ ಕಟ್ಟಡಗಳನ್ನು ಗಣರಾಜ್ಯೋತ್ಸವದಂದು ವಿದ್ಯುತ್ ದೀಪಗಳಿಂದ ಅಲಂಕರಿಸುವಂತೆ ಜಿಲ್ಲಾಧಿಕಾರಿಗಳು ವಿನಂತಿಸಿದ್ದಾರೆ,
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ,ಉಪ ನಿರ್ದೇಶಕರು,ಪ್ರಾದೇಶಿಕ ಸಾರಿಗೆ ಅಧಿಕಾರಿ,ಹೆಚ್ಚುವರಿ ಜಿಲ್ಲಾಧಿಕಾರಿಗಳು ಮುಂತಾದವರು ಹಾಜರಿದ್ದರು.