ಮಂಗಳೂರು, ಡಿಸೆಂಬರ್.08: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಬಳ ನಡೆಸುವುದಕ್ಕೆ ಜಿಲ್ಲಾಡಳಿತಕ್ಕೆ 79ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದ್ದು, ಈ ಸಂಬಂಧ ಕ್ರಿಯಾಯೋಜನೆ ರೂಪಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು ಸಭೆ ಕರೆಯಲಾಗಿದ್ದು ಸಮಗ್ರ ಚರ್ಚೆ ನಡೆಯಿತು.
ಕನ್ನಡ ಸಂಸ್ಕೃತಿ ಇಲಾಖೆ ಯಿಂದ 23 ಪ್ರಸಿದ್ಧ ಆಧುನಿಕ ಹಾಗೂ ಸಾಂಪ್ರ ದಾಯಿಕ ಕಂಬಳ ಗಳ ಪಟ್ಟಿ ಮಾಡಿದ್ದು, ಇನ್ನು ಸೇರ್ಪಡೆ ಗೊಳ್ಳ ಲಿರುವ ಹಾಗೂ ಸಂಪ್ರಾ ದಾಯಿಕ ಕಂಬಳ ಗಳು ನಡೆಯ ದಿರುವ ಬಗ್ಗೆ ಮಾಹಿತಿ ಪಡೆದು ಪಟ್ಟಿ ತಯಾ ರಿಸುವ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿ ಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಯು ಟಿ ಖಾದರ್ ಅವರು ಸಭೆಯಲ್ಲಿ ಉಪಸ್ಥಿತರಿದ್ದು, ಸಲಹೆ ನೀಡಿದರು. ಜಿಲ್ಲೆಯಲ್ಲಿ ಕಂಬಳ ನಡೆಸುವ ಪ್ರಮುಖರು ಸಭೆಯಲ್ಲಿದ್ದು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಪ್ರತೀ ಕಂಬಳಕ್ಕೆ ಒಂದು ಲಕ್ಷ ರೂ. ಹಾಗೂ ಮೂಲಭೂತ ಸೌಕರ್ಯಕ್ಕೆ 2ಲಕ್ಷ ರೂ.,ಗಳಂತೆ ಹಾಗೂ ಸಾಕ್ಷ್ಯ ಚಿತ್ರ ನಿರ್ಮಾಣಕ್ಕೆ ಹತ್ತು ಲಕ್ಷ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀಮತಿ ಮಂಗಳಾ ಅವರು ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಅಪರ ಜಿಲ್ಲಾಧಿಕಾರಿ ದಯಾನಂದ ಅವರು ಉಪಸ್ಥಿತರಿದ್ದರು.