ಮಂಗಳೂರು, ಜನವರಿ. 15:- ಅಂಬಿಗರ ಚೌಡಯ್ಯರ ದಿನಾಚರಣೆಯನ್ನು ಜನವರಿ21 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರು ನಗರದಲ್ಲಿ ಏರ್ಪಡಿಸಲಾಗುವುದೆಂದು ಜಿಲ್ಲಾಧಿಕಾರಿಗಳಾದ ಎನ್.ಪ್ರಕಾಶ್ ಇವರು ತಿಳಿಸಿದರು.
ಅವರು ಇಂದು ಅಂಬಿಗರ ಚೌಡಯ್ಯ ದಿನಾಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವೀ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸರಕಾರ ನೀಡಿರುವ ಅನುದಾನದಲ್ಲಿ ಆಮಂತ್ರಣ ಪತ್ರಿಕೆ, ಬ್ಯಾನರ್ ಮತ್ತು ವಚನ ಮತ್ತು ಉಪನ್ಯಾಸ ಕಾರ್ಯಕ್ರಮವನ್ನು ನಡೆಸುವ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚನೆಗಳನ್ನಿತ್ತರು.
ಸಭೆಯಲ್ಲಿ ನಗರಪಾಲಿಕೆ ಆಯುಕ್ತರಾದ ಡಾ. ಹರೀಶ್ ಕುಮಾರ್, ಅಪರ ಜಿಲ್ಲಾಧಿಕಾರಿ ದಯಾನಂದ್, ಅಂಬಿಗ ಚೌಡಯ್ಯರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಿದ್ದರು..