Friday, March 22, 2013

ಸ್ವೀಪ್ ಬಗ್ಗೆ ಪಕ್ಷಗಳ ಮುಖಂಡರಿಗೆ ಮಾಹಿತಿ


ಮಂಗಳೂರು, ಮಾರ್ಚ್. 22:-ಮತದಾನದ ಪ್ರಕ್ರಿಯೆಯಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆಗೆ ಪೂರ್ವಭಾವಿಯಾಗಿ ಅರ್ಹ ಮತದಾರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂಬ ಸಂದೇಶವನ್ನು ವಿವಿಧ ರೀತಿಗಳಲ್ಲಿ ಜನಮಾನಸಕ್ಕೆ ತಲುಪಿಸುವ ಇನ್ನೊಂದು ಹಂತವಾಗಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿಶೇಷ ಸಭೆಯನ್ನು ಆಯೋಜಿಸಲಾಗಿತ್ತು.
ಮತ ದಾನ ದಂದು ಮತ ದಾರರ ಪಟ್ಟಿ ಯಲ್ಲಿ ಹೆಸರಿ ಲ್ಲವೆಂದು ಗೊಂದಲ ಮೂಡಿ ಸದೇ ಪೂರ್ವ ಭಾವಿ ಯಾಗಿ ಮತ ದಾರರ ಪಟ್ಟಿ ಪರಿಶೀ ಲನೆ ಹಾಗೂ ನೋಂದ ಣಿಗೆ ಇರುವ ಅವ ಕಾಶ ಗಳು, ಯಾರ ನೆರವನ್ನು ಪಡೆದುಕೊಳ್ಳಬಹುದು ಎಂಬ ಬಗ್ಗೆ ಸವಿವರ ಮಾಹಿತಿಯನ್ನು ಜಿಲ್ಲಾಧಿಕಾರಿಗಳು ನೀಡಿದರು.
ಸ್ಥಳೀಯವಾಗಿ ಬಿಎಲ್ಓಗಳಿಂದ ಪಡೆಯಬಹುದಾದ ಮಾಹಿತಿ, ಗ್ರಾಮ ಪಂಚಾಯತ್ ನಿಂದ ಹಿಡಿದು ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸಲು ಕೈಗೊಂಡಿರುವ ಕ್ರಮಗಳನ್ನು ವಿವಿಧ ಪಕ್ಷಗಳ ಮುಖಂಡರಿಗೆ ನೀಡಲಾಯಿತು.ಯಾವುದೇ ಸಂದೇಹಗಳಿದ್ದರೂ ಜಿಲ್ಲಾಡಳಿತವನ್ನು ಸಂಪರ್ಕಿಸಿ ಎಂದ ಜಿಲ್ಲಾಧಿಕಾರಿಗಳು, ನ್ಯಾಯ ಸಮ್ಮತ ಮತ್ತು ಮುಕ್ತ ಚುನಾವಣೆ ಜಿಲ್ಲಾಡಳಿತದ ಹೊಣೆಯಾಗಿದ್ದು, ಸ್ಪಷ್ಟೀಕರಣ ಕೇಳಿ ಮುಂದುವರಿಯಿರಿ ಎಂಬ ಸಲಹೆಯನ್ನು ಪ್ರಶ್ನೆಯೊಂದಕ್ಕೆ ನೀಡಿದರು.
ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಅಧಿಕಾರಿಗಳು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಜ್ಞಾವಂತರ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಶೇಕಡಾವಾರು ಮತದಾನ ಹೆಚ್ಚಾಗಬೇಕಿದೆ. ಇದಕ್ಕೆ ಎಲ್ಲರ ಸಹಕಾರದ ಅಗತ್ಯವಿದೆ ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಪೋಲೀಸ್ ಕಮೀಷನರ್ ಮಾತನಾಡಿ, ಚುನಾವಣೆ ಆಯೋಗದ ನಿರ್ದೇಶನದಂತೆ ಪೋಲೀಸ್ ಇಲಾಖೆ,ಕಂದಾಯ ಇಲಾಖೆ ಸಮನ್ವಯದಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಇಲ್ಲಿ ನಮಗೆ ಯಾರೂ ಶತ್ರುಗಳಿಲ್ಲ ಎಂಬುದನ್ನು ಅರಿತು ನಡೆಯಬೇಕು.ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾದರೆ ಕಠಿಣ ಕ್ರಮ ಶತ: ಸಿದ್ದ;ಎಲ್ಲರೂ ಕಾನೂನನ್ನು ಗೌರವಿಸಬೇಕು ಮತ್ತು ಪಾಲಿಸಬೇಕು ಎಂದರು.
ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗೋಯಲ್ ಅವರು ಮಾತನಾಡಿ ತಾಲೂಕು ಮಟ್ಟದಲ್ಲಿ ಪೋಲೀಸ್ ಮತ್ತು ತಹಸೀಲ್ದಾರ್ ಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದರು.
ಮತದಾನದ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿರುವ ಸಮಸ್ಯೆ ಬಗ್ಗೆ ಪಕ್ಷಗಳ ಮುಖಂಡರ ಸಂದೇಹಗಳಿಗೆ ಅಪರ ಜಿಲ್ಲಾಧಿಕಾರಿ  ಕೆ.ಎ.ದಯಾನಂದ ಮತ್ತು ಪಾಲಿಕೆ ಆಯುಕ್ತರಾದ ಡಾ. ಹರೀಶ್ ಕುಮಾರ್  ಉತ್ತರಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್.ವಿಜಯಪ್ರಕಾಶ್ ಉಪಸ್ಥಿತರಿದ್ದರು.
ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು. ಆನ್ ಲೈನ್ ನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸುವ ಬಗ್ಗೆ ಅಪರ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.