ಮಂಗಳೂರು,ಮಾರ್ಚ್. 25:-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವೀಪ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಅಧಿಕಾರಿಗಳ ವಿಶೇಷ ಸಹಕಾರ ಪಡೆಯಲು ನಿರ್ಧರಿಸಿದ ಸ್ವೀಪ್ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ ಕೆ ಎನ್ ವಿಜಯಪ್ರಕಾಶ್ ಅವರು ಇಂದು ಜಿಲ್ಲಾ ಮಟ್ಟದ ಅಧಿಕಾರಿಗಳ ವಿಶೇಷ ಸಭೆ ಕರೆದು ಮಂಗಳೂರು ವ್ಯಾಪ್ತಿಗೆ ಯೋಜನಾ ನಿರ್ದೇಶಕರಾದ ಶ್ರೀಮತಿ ಸೀತಮ್ಮ ಹಾಗೂ ಪುತ್ತೂರು ವ್ಯಾಪ್ತಿಗೆ ರಾಷ್ಟ್ರೀಯ ಶಿಕ್ಷಣ ಮಾಧ್ಯಮ ಅಧಿಕಾರಿಗಳಾದ ಶಿವರಾಮಯ್ಯ ಅವರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಿದರು.
ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಚೇರಿಗಳ ಎದುರು ಮತದಾರರಲ್ಲಿ ಜಾಗೃತಿ ಮೂಡಿಸಲು ಹಾಗೂ ಮತದಾನಕ್ಕೆ ಪ್ರೇರೆಪಣೆ ನೀಡಲು ಎಲ್ಲ ಕಚೇರಿಗಳ ಎದುರು ಸಾರ್ವಜನಿಕರಿಗೆ ಕಾಣುವ ಹಾಗೆ ಬ್ಯಾನರ್ ಗಳ ಮೂಲಕ ಮಾಹಿತಿ ನೀಡುವ ಕಾರ್ಯವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಯಕ್ಷಗಾನ, ಬೀದಿನಾಟಕ, ಮೈಮ್ ಶೋ ಮುಖಾಂತರ, ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳ ಮುಖಾಂತರ ಜನರು ತಮ್ಮ ಹಕ್ಕನ್ನು ಪ್ರತಿಪಾದಿಸುವಂತೆ ಪ್ರೇರೆಪಿಸಲು ಕ್ರಮಕೈಗೊಳ್ಳಲು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆ ನಿರ್ಧರಿಸಿತು. ಸ್ಥಳೀಯ ಭಾಷೆಗಳಾದ ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆಗಳ ಮುಖಾಂತರ ಮೈಕ್ ಗಳಲ್ಲಿ ಅನೌನ್ಸ್ ಮಾಡುವುದರಿಂದ ಜನರಲ್ಲಿ ಅರಿವು ಮೂಡಿಸುವ ಬಗ್ಗೆ ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ಸಲಹೆ ಮಾಡಿದರು. ಎಲ್ಲ ಯುವಜನ ಒಕ್ಕೂಟ ಮತ್ತು ಕಾಲೇಜಿನಲ್ಲಿರುವ ವಿದ್ಯಾರ್ಥಿ ಕಲ್ಯಾಣ ವಿಭಾಗದ ಮುಖ್ಯಸ್ಥರು ಮತ್ತು ಯುವ ಜನ ಇಲಾಖಾ ವ್ಯಾಪ್ತಿಗೆ ಬರುವ ಸಮೂಹಗಳೊಂದಿಗೆ ಸತತ ಸಂಪರ್ಕವಿರಿಸಿಕೊಂಡು ಮಾಹಿತಿ ಶಿಕ್ಷಣ ಕಾರ್ಯಕ್ರಮ ಯಶಸ್ಸಿಗೆ ಕ್ರಮಕೈಗೊಳ್ಳುವುದಾಗಿ ಹೇಳಿದರು.
ಸಕರ್ಾರೇತರ ಸಂಘಸಂಸ್ಥೆಗಳ ನೆರವು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖಾ ಅಧಿಕಾರಿಗಳಿಗೆ ನಿಗದಿತ ಮಾದರಿಗಳನ್ನು ಈ ನಿಟ್ಟಿನಲ್ಲಿ ನೀಡಲಾಯಿತು. ಮುಖ್ಯ ಯೋಜನಾಧಿಕಾರಿ ನಝೀರ್, ಅವರನ್ನೊಳಗೊಂಡಂತೆ ಜಂಟಿ ನಿರ್ದೇಶಕರು ಕೃಷಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.