ಮಂಗಳೂರು, ಮಾರ್ಚ್.08:2013 ನೇ ಮಾಚರ್್ 13 ರಿಂದ 28 ರ ವರೆಗೆ ನಡೆಯಲಿರುವ ಪದವಿ ಪೂರ್ವ ಪಿಯುಸಿ ಪರೀಕ್ಷೆ ಸುಸೂತ್ರವಾಗಿ ನಡೆಯಲು ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆಯೆಂದು ಜಿಲ್ಲಾಧಿಕಾರಿ ಎನ್.ಪ್ರಕಾಶ್ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಪದವಿ ಪೂರ್ವ ಪರೀಕ್ಷಾ ಪೂರ್ವ ತಯಾರಿ ಸಭೆಯಲ್ಲಿ ಮಾತನಾಡುತ್ತಿದ್ದರು.
ಬೆಂಗಳೂರು ನಂತರ ಅತೀ ಹೆಚ್ಚು ವಿದ್ಯಾರ್ಥಿ ಗಳು ಮಂಗ ಳೂರಿನಲ್ಲಿ ಪರೀಕ್ಷೆ ಬರೆ ಯುತ್ತಿದ್ದು,ಪರೀಕ್ಷೆ ವೇಳೆ ನಕಲು ತಡೆಗೆ ಪದವಿ ಪೂರ್ವ ಶಿಕ್ಷಣ ಬೋರ್ಡಿನಿಂದ 10 ಜಾಗ್ರತ ದಳ ರಚನೆಗೊಳಿಸಲಾಗಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜಾಗ್ರತ ದಳ ರಚನೆಯಾಗಿದ್ದು,ಈ ಜಾಗ್ರತ ದಳದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ,ಸಹಾಯಕ ಆಯುಕ್ತರು,ಪದವಿಪೂರ್ವ ಉಪನಿರ್ದೇಶಕರು,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕರು ಸದಸ್ಯರಿರುತ್ತಾರೆ. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಕಾರ್ಯ ನಿರ್ವಹಣಾಧಿಕಾರಿ,ಶಿಶು ಅಭಿವೃದ್ಧಿ ಯೋಜನಾಧಿಕಾರಿ,ಕ್ಷೇತ್ರ ಶಿಕ್ಷಣಾಧಿಕಾರಿಗಳು ಇರುತ್ತಾರೆ. ನಮ್ಮ ಜಿಲ್ಲೆಯಲ್ಲಿ ಒಟ್ಟು 170 ಕಾಲೇಜುಗಳಿದ್ದು 32267 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿರುವರು. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸುವಂತೆ ಪೋಲೀಸ್ ಕಮೀಷನರ್ ರವರಿಗೆ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಪೋಲೀಸ್ ಅಧೀಕ್ಷಕರಿಗೆ ಸೂಚಿಸಲಾಗಿದೆ. ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಪ್ರಶ್ನೆ ಪತ್ರಿಕೆಗಳನ್ನು ಇಡಲು ಸ್ಟ್ರಾಂಗ್ ರೂಂ ಮತ್ತು ರೂಟ್ ಅಫೀಸರ್ಗಳ ತಂಡ ರಚನೆಯಾಗಿದೆ. 49 ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮಗಳನ್ನು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪ್ರಾಂಶುಪಾಲರಿಗೆ ಸೂಚಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ದಯಾನಂದ್,ಪದವಿಪೂರ್ವ ಉಪನಿರ್ದೇಶಕರು,ಸೆಂಟರ್ ಗಳ ಪ್ರಾಂಶುಪಾಲರುಗಳು ಉಪಸ್ಥಿತರಿದ್ದರು.