ಮಂಗಳೂರು, ಮಾರ್ಚ್.24: ದಕ್ಷಿಣಕನ್ನಡ ಜಿಲ್ಲೆಯಲ್ಲಿ 2013, ಎಪ್ರಿಲ್ 1 ರಿಂದ ಎಪ್ರಿಲ್ 10 ರವರೆಗೆ ಸುಗಮವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಹಾಗೂ ಜಿಲ್ಲೆಯ ವಿದ್ಯಾಂಗ ಇಲಾಖೆ ಸಜ್ಜಾಗಿದ್ದು,ಪೂರ್ವಭಾವೀ ತಯಾರಿಗಳನ್ನು ನಡೆಸಲಾಗಿದೆಯೆಂದು ದಕ್ಷಿಣಕನ್ನಡ ಅಪರ ಜಿಲ್ಲಾಧಿಕಾರಿಗಳಾದ ಕೆ.ಎ.ದಯಾನಂದ್ ತಿಳಿಸಿದ್ದಾರೆ.
ಅವರು ಶನಿ ವಾರ ಜಿಲ್ಲಾಧಿ ಕಾರಿ ಕಚೇರಿ ಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತ ನಾಡು ತ್ತಿದ್ದರು. ಸುಲಲಿತ ವಾಗಿ ಪರೀಕ್ಷೆ ಗಳನ್ನು ನಡೆಸಲು ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು, ನಕಲು ತಡೆಗೆ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲಾ ಕೇಂದ್ರದಿಂದ ತಾಲೂಕು ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಸಾಗಿಸಲು ವ್ಯವಸ್ಥೆ ಮಾಡಲಾಗಿದೆ.
ಜಿಲ್ಲೆಯಲ್ಲಿ ವಿಭಾಗ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸ್ಕ್ವಾಡ್ ರಚಿಸಲಾಗಿದ್ದು, ತಂಡ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡುವಾಗ ವಿದ್ಯಾಥರ್ಿಗಳು ಗಾಬರಿ ಬೀಳದಂತೆ ವತರ್ಿಸಬೇಕು. ವಿದ್ಯಾಥರ್ಿಗಳ ಪರೀಕ್ಷೆ ಬರೆಯುವಾಗ ಅವರ ಬರವಣಿಗೆಗೆ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಿಸಬೇಕೆಂದು ಕಿವಿಮಾತು ಹೇಳಿದರು. ಪರೀಕ್ಷೆಗಳು ಬೆಳಿಗ್ಗೆ 9.30 ಗಂಟೆಗೆ ಪ್ರಾರಂಭವಾಗಿ ಪರೀಕ್ಷೆ ಮುಗಿಯವವರೆಗೆ ಯಾರನ್ನು ಹೊರಗೆ ಬಿಡಬಾರದೆಂದು ಸೂಚಿಸಿದರು.
ಈ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವ ವ್ಯವಸ್ಥೆ ಮಾಡಲಾಗುವುದು.ಎಸ್ಎಸ್ಎಲ್ ಸಿ ಪರೀಕ್ಷೆಯ ಮೌಲ್ಯ ಮಾಪನವನ್ನು ಎಪ್ರಿಲ್ 15 ರಿಂದ ಪ್ರಾರಂಭಿಸಿ 20 ರೊಳಗೆ ಮುಗಿಸಲು ಕ್ರಮ ಕೈಗೊಳ್ಳಲಾಗುವುದೆಂದರು.
ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮೋಸೆಸ್ ಜಯಶೇಖರ್ ಸ್ವಾಗತಿಸಿದರು. ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಾಂಶುಪಾಲರು, ಎಲ್ಲಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಾರ್ಯ ನಿರ್ವಹಣಾಧಿಕಾರಿಗಳು,ತಹಶೀಲ್ದಾರರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ದ್ವಿತೀಯ ಪಿಯುಸಿ ಪರೀಕ್ಷೆ:
ಶನಿವಾರ ( 23-3-13) ಪಿಯುಸಿ ವ್ಯವಹಾರ ಅಧ್ಯಯನ(ಬಿಸಿನೆಸ್ ಸ್ಟಡೀಸ್) ಪರೀಕ್ಷೆಗೆ ಒಟ್ಟು 13552 ವಿದ್ಯಾರ್ಥಿಗಳು ಹೆಸರು ನೊಂದಾಯಿಸಿದ್ದು, 218 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 13334 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಕೆಮಿಸ್ಟ್ರಿ ಪರೀಕ್ಷೆಗೆ ಒಟ್ಟು 11204 ವಿದ್ಯಾರ್ಥಿಗಳು ಹೆಸರು ನೊಂದಾಯಿಸಿದ್ದು, 109 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 11095 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆಂದು ಪಿ ಯು ಬೋರ್ಡ್ ಅಧಿಕಾರಿಗಳು ತಿಳಿಸಿದ್ದಾರೆ.