ಮಂಗಳೂರು, ಜುಲೈ. 23:- ಆಗಸ್ಟ್ 15ರಂದು 67ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ಜುಲೈ 22ರಂದು ಆಯೋಜಿಸಲಾಗಿತ್ತು.
ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಯಿತು ಹಾಗೂ ಸಮಿತಿ ಅಧ್ಯಕ್ಷರಿಗೆ ಹೊಣೆಗಳನ್ನು ಹಂಚಲಾಯಿತು. ಅಪರಾಹ್ನ ನಗರದ ಪುರಭವನದಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ದಯಾನಂದ ಕೆ ಎ, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರದೀಪ್ ಕುಮಾರ್ ಕಲ್ಕೂರ ಮತ್ತು ವಿವಿಧ ಇಲಾಖಾ ಮುಖ್ಯಸ್ಥರು ಸಭೆಯಲ್ಲಿದ್ದರು.